Featured
ವಿಜಯಪುರಕ್ಕೆ ಹುತಾತ್ಮ ಯೋಧ ಶಿವಾನಂದ ಬಡಿಗೇರ ಪಾರ್ಥೀವ ಶರೀರ: ಸಾರ್ವಜನಿಕರಿಂದ ಶ್ರದ್ಧಾಂಜಲಿ

ರೈಸಿಂಗ್ ಕನ್ನಡ:
ವಿಜಯಪುರ :
ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಜಿಲ್ಲೆಯ ಹೆಮ್ಮೆಯ ವೀರ ಯೋಧ ಶಿವಾನಂದ ಬಡಿಗೇರ ಅವರ ಪಾರ್ಥೀವ ಶರೀರ ಸ್ವಗ್ರಾಮ ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮಕ್ಕೆ ಗುರುವಾರ ತರಲಾಯಿತು.
ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರತನಾಗಿದ್ದ ಯೋಧ ಶಿವಾನಂದ ಬಡಿಗೇರ ವಿದ್ಯುತ್ ಸ್ಪರರ್ಶಿಸಿದ ಪರಿಣಾಮ ಸಾವಿಗೀಡಾಗಿದ್ದರು. 14 ವರ್ಷಗಳ ಹಿಂದೆ ಸೇನೆ ಸೇರಿದ್ದರು. ಮೊದಲು ಬಾಂಗ್ಲಾ ದೇಶ, ನಂತರ ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿ ಜಮ್ಮು ಕಾಶ್ಮೀರದ ಗಡಿಯಲ್ಲಿ ನಿಯೋಜನೆ ಯಾಗಿದ್ದರು.
ಒಂದೂವರೆ ವರ್ಷದ ಹಿಂದಷ್ಟೇ ತಾಳಿಕೋಟಿ ತಾಲೂಕಿನ ತುಂಬಗಿಯ ಪುಷ್ಪಾ ಎಂಬುವರ ಜೊತೆಗೆ ವಿವಾಹವಾಗಿತ್ತು.ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರಿಂದ ಇಂದು ಮುದ್ದೇಬಿಹಾಳ ತಾಲೂಕಿನ ತಂಗಡಗಿ ಮಾರ್ಗವಾಗಿ ಬಸರಕೋಡ ಗ್ರಾಮಕ್ಕೆ ಆಗಮಿಸಿತು. ಮುದ್ದೇಬಿಹಾಳ ಪಟ್ಟಣದಲ್ಲಿ ಸಾರ್ವಜನಿಕರು ಗೌರವ ಸಲ್ಲಿಸಿದರು.
ಬಸರಕೋಡ ಗ್ರಾಮದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಾರ್ವಜನಿಕ ರಿಂದ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನೇರವೇರಿತು. ಎಲ್ಲೆಡೆ ಭಾರತ ಮಾತಾ ಕಿ ಜೈ..ಜೈ ಜವಾನ ಎಂಬ ಘೋಷಣೆಗಳು ಮೊಳಗಿದವು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?