Featured
ಆದಷ್ಟು ಬೇಗ ಡ್ರಗ್ಸ್ ಮುಕ್ತ ಕರ್ನಾಟಕ: ಡಿಜಿ-ಐಜಿಪಿ ಪ್ರವೀಣ್ ಸೂದ್
![](https://risingkannada.com/wp-content/uploads/2020/09/praveen-sood.jpg)
ರೈಸಿಂಗ್ ಕನ್ನಡ:
ವಿಜಯಪುರ:
ಬೆಂಗಳೂರು ಸಿಟಿ ಸೇರಿದಂತೆ ರಾಜ್ಯದಲ್ಲಿ ಡ್ರಗ್ ಮಾಫಿಯಾ ಹರಡಿರುವ ವಿಚಾರ ಕುರಿತು ರಾಜ್ಯ ಪೋಲಿಸ್ ಇಲಾಖೆಯೂ ಆಯಾ ವಲಯವಾರಿನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್ ತಿಳಿಸಿದರು.
ಈ ಕುರಿತು ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಹಲವೆಡೆ ದಾಳಿ ನಡೆಸಿ ಡ್ರಗ್ ಸೀಜ್ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಐಜಿಪಿಗಳಿಗೆ ಹಾಗೂ ಆಯಾ ಜಿಲ್ಲಾ ಎಸ್ ಪಿ ಗಳಿಗೆ ಸೂಚಿಸಿದ್ದೇನೆ.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಜೊತೆಗೆ ಮಹಾರಾಷ್ಟ್ರ ಮತ್ತು ಆಂಧ್ರ ಗಡಿಗೆ ಹೊಂದಿರುವ ಜಿಲ್ಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ಗಡಿ ಜಿಲ್ಲೆಗಳಲ್ಲಿ ಡ್ರಗ್ ಒಳಬಾರದಂತೆ ಹೇಗೆ ತಡೆಯಬೇಕು ಮತ್ತು ಹೇಗೆ ಹತೋಟಿಗೆ ತರಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಡ್ರಗ್ ಮಾಫಿಯಾ ಬಗ್ಗೆ ಕಾರ್ಯಚರಣೆ ನಡೆಯುತ್ತಿದೆ. ನಡೆಯುತ್ತಲೇ ಇರುತ್ತದೆ.
ಪೊಲೀಸ್ ಕಾರ್ಯಚರಣೆಗಳ ಬಗ್ಗೆ ಶ್ರೀಘ್ರದಲ್ಲಿ ಫಲಿತಾಂಶ ಸಿಗಲಿದೆ. ಹಾಗೂ ಡ್ರಗ್ಸ್ ಪತ್ತೆಹಚ್ಚುವುದು, ತಡೆಗಟ್ಟುವ ಕೆಲಸ ನಿರಂತರವಾಗಿ ಮಾಡುತ್ತಲೇ ಇದ್ದೇವೆ. ಆದಷ್ಟು ಬೇಗನೆ ಡ್ರಗ್ಸ್ ಮುಕ್ತ ರಾಜ್ಯ ಮಾಡಲು ತೀರ್ಮಾನಿಸಲಾಗಿದ್ದು, ರಾಜ್ಯದಿಂದ ಡ್ರಗ್ಸ್ ಹೊರಹಾಕಲು ಪೊಲೀಸ್ ಇಲಾಖೆ ಸಿದ್ದವಾಗಿದೆ ಎಂದು ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?