Featured
ಬಿಜೆಪಿ ಶಾಸಕ ಯತ್ನಾಳ್ ಗೆ ಕೊಲೆ ಬೆದರಿಕೆ: ಪ್ರಧಾನಿ ಕಚೇರಿಗೆ ದೂರು ನೀಡಿದ ಬೆಂಬಲಿಗರು
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ವಿಜಯಪುರ ಶಾಸಕ ಯತ್ನಾಳ್‌ಗೆ ಪೊಲೀಸ್ ಠಾಣೆ ಎದುರೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಚೇರಿಗೆ ಯತ್ನಾಳ್ ಬೆಂಬಲಿಗ ರಾಘವ ಅಣ್ಣಿಗೇರಿ ದೂರು ನೀಡಿದ್ದಾರೆ.
ಶಾಸಕರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ರಘು ಕಣಮೇಶ್ವರ ವಿರುದ್ಧ ಎಸ್ಪಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಸೂಚಿಸುವಂತೆ ಪ್ರಧಾನ ಮಂತ್ರಿಗಳಿಗೆ ದೂರು ನೀಡಿದ್ದಾರೆ.
ಮೇಲ್ ಮೂಲಕ PMO ಕಚೇರಿಗೆ ದೂರು ರವಾನೆ ಮಾಡಿದ್ದು, ದೂರು ರಿಜಿಸ್ಟರ್ ಮಾಡಿಕೊಳ್ಳಲಾಗಿದೆ ಎಂದು PMO ಕಚೇರಿಯಿಂದಲು ರಾಘವ್ ಅಣ್ಣಿಗೇರಿ ಅವರಿಗೆ ರಿಟರ್ನ್ ಮೇಲ್ ಬಂದಿದೆ.
ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಹಿಂದೆ ಯಾರಿದ್ದಾರೆ ಅನ್ನೋ ಬಗ್ಗೆಯು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ರಾಘವ ಅಣ್ಣಿಗೇರಿ ಮನವಿ ಮಾಡಿದ್ದಾರೆ. ನಿನ್ನೆ ನಗರದ ಗೋಳಗುಮ್ಮಟ ಪೊಲೀಸ್ ಠಾಣೆ ಎದುರು ರಘು ಕಣಮೇಶ್ವರ ಎಂಬಾತ ಶಾಸಕ ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?