Featured
ಕೊರೊನಾ ಅಬ್ಬರ : ರಾಜ್ಯದಲ್ಲಿ ದಾಖಲೆಯ 12,545 ಡಿಸ್ಚಾರ್ಜ್: 9,464 ಹೊಸ ಕೇಸ್
![](https://risingkannada.com/wp-content/uploads/2020/07/tumkuru-corona-6.jpeg)
ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. ಆದರೆ ಕಳೆದ 24 ಗಂಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶುಕ್ರವಾರ 9,464ರಷ್ಟು ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,40,411ಕ್ಕೇ ಏರಿದೆ.
ಸಾವಿನ ಪ್ರಮಾಣದಲ್ಲೂ ಕೊರೊನಾ ತನ್ನ ಕ್ರೂರ ದೃಷ್ಟಿಯನ್ನ ಬೀರಿದೆ. ಶುಕ್ರವಾರ 130 ಮಂದಿ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಕೊರೊನಾಗೆ ಒಟ್ಟು ಬಲಿಯಾದವರ ಒಟ್ಟು ಸಂಖ್ಯೆ 7,067ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 98, 326 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ದಾಖಲೆಯ 12,545 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 3,34,999ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಶುಕ್ರವಾರ 3,426 ಹೊಸ ಸೋಂಕು ಪತ್ತೆಯಾಗಿದೆ.ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,63,631ಕ್ಕೆ ಏರಿದೆ. ಕಳೆದ 24 ಗಂಟೆಯಲ್ಲಿ 30 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ 19ಗೆ ಬಲಿಯಾದವರ ಒಟ್ಟು ಸಂಖ್ಯೆ 2,370ಕ್ಕೇ ಏರಿದೆ. ನಗರದಲ್ಲಿ 40,936 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ 6,116 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?