Featured
ಪ್ರಧಾನಿ ಮೋದಿ ಭೇಟಿ: ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ ಸಿಎಂ ಬಿಎಸ್ವೈ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಹಲವಾರು ವಿಫಲ ಪ್ರಯತ್ನಗಳ ನಂತರ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ.
ಪಾರ್ಲಿಮೆಂಟ್ ಹೌಸ್ನಲ್ಲಿ ಕೇವಲ 15 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ ಸಿಎಂ ಬಿಎಸ್ವೈ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ ಅನುದಾನ ಮತ್ತು ರಾಜ್ಯ ಪ್ರವಾಹ ನಿರ್ವಹಣಾ ನಿಧಿ ಅಥವಾ ರಾಷ್ಟ್ರೀಯ ನಿಧಿಯ ನಿಯಮಗಳನ್ನ ಪರಿಷ್ಕರಿಸಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಕೃಷ್ಣೆ ಮತ್ತು ಭದ್ರ ಮೇಲ್ದಂಡೆ ಯೋಜನೆಗಳನ್ನ ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸುವಂತೆ ಪ್ರಧಾನಿಯನ್ನ ಸಿಎಂ ಒತ್ತಾಯಿಸಿದ್ದಾರೆ. ಮೇಕೆದಾಟು,ಕಳಾಸ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಯನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಸಂಪುಟ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಕಾಶ್ ಜಾವ್ಡೆಕರ್ ಸೇರಿದಂತೆ ಹಲವಾರು ನಾಯಕರುಗಳನ್ನ ಭೇಟಿಯಾಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?