Featured
ಸಿಎಂ ದೆಹಲಿ ಭೇಟಿ: ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ವಿಶ್ವಾಸದಲ್ಲಿ ಬಿಎಸ್ವೈ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೆಹಲಿ ಪ್ರವಾಸ ಫಲಪ್ರದವಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ರಾಜ್ಯದ ಅಭಿವೃದ್ಧಿಗೆ ಒಪ್ಪಿಗೆ ನೀಡುವ ರೀತಿಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಕೆಲವೇ ದಿನಗಳಲ್ಲಿ ಪರಿಹಾರ ಕೊಡುವ ವಿಶ್ವಾಸವಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಯಡಿಯೂರಪ್ಪ ಶನಿವಾರ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.
ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿಗೆ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರಿಗೆ ಅಭಿವೃದ್ಧಿಗೆ ಮಾಹಿತಿ ನೀಡಿದ್ದೇನೆ ಎಂದರು.
ಜಾಹೀರಾತು
ಇದಕ್ಕೂ ಮುನ್ನ ಶುಕ್ರವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಶನಿವಾರವೇ ಪ್ರಧಾನಿ ಜೊತೆ ಅವರು ಮಾತನಾಡಿ ಮುಂದಿನ ಸೂಚನೆ ಕೊಡಬಹುದೆಂದು ಸುಳಿವು ಕೊಟ್ಟರು.
ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನ ತಿಳಿಸುತ್ತಾರೆ. ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆಯಾಗಬೇಕೆಂಬುದು ನಮ್ಮ ಇಚ್ಛೆಯಾಗಿದೆ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?