Featured
ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 12 ದಿನಗಳ ಹಿಂದೆ ಕೊರೊನಾ ಸೋಂಕಿಗೆ ಗುರಿಯಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಸುರೇಶ್ ಅಂಗಡಿ ಉಸಿರಾಟದ ತೊಂದರೆಗೆ ಸಿಲುಕಿ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಎರಡು ವಾರಗಳ ಹಿಂದೆಯಷ್ಟೆ ಸುರೇಶ್ ಅಂಗಡಿ, ನಾನು ಕೊರೊನಾಗೆ ತುತ್ತಾಗಿದ್ದು ನನಗೆ ರೋಗದ ಲಕ್ಷಣ ಇಲ್ಲ ಎಂದು ಟ್ವೀಟ್ ಮಾಡಿದ್ದರು.
ಜಾಹೀರಾತು
ಸುರೇಶ್ ಅಂಗಡಿ (65)ನಿಧನಕ್ಕೆ ಬಿಜೆಪಿ ನಾಯಕರು ಸೇರಿದಂತೆ ರಾಜಕೀಯ ನಾಯಕರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಸುರೇಶ್ ಅಂಗಡಿ ಅವರ ಕುಟುಂಬದ ಸದಸ್ಯರು ದೆಹಲಿಯಲ್ಲಿದ್ದಾರೆ. ಸುರೇಶ್ ಅಂಗಡಿ ಅವರ ಅಂತಿಮ ಸಂಸ್ಕಾರವನ್ನ ಕುಟುಂಬದ ಸದಸ್ಯರು ನಿರ್ಧರಿಸಲಿದ್ದಾರೆ. ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?