Featured
ರಾಜಸ್ಥಾನ ರಾಯಲ್ಸ್ ಅಬ್ಬರಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಪಂಕ್ಚರ್
![](https://risingkannada.com/wp-content/uploads/2020/09/rr-1.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್;
ಸಂಜು ಸ್ಯಾಮ್ಸನ್ ಅವರ ಅಬ್ಬರ ಆಟ ಮತ್ತ ರಾಹುಲ್ ತಿವೇಟಿಯಾ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಹೊಸ ಇತಿಹಾಸ ಬರೆದಿದೆ.
ಐಪಿಎಲ್ನಲ್ಲಿ ಈ ಎಂದು ಕೇಳದ ದಾಖಲೆಯೊಂದನ್ನ ಸ್ಟೀವ್ ಸ್ಮೀತ್ ನೇತೃಥ್ವದ ರಾಜಸ್ತಾನ ರಾಯಲ್ಸ್ ತಂಡ ಮಾಡಿದೆ. ಇದಕ್ಕೆ ಇಲ್ಲಿನ ಶಾರ್ಜಾ ಮೈದಾನ ಸಾಕ್ಷಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕನ್ನಡಿಗ ಮಯಾಂಕ್ ಅಗರ್ವಾಲ್ (106) ಅವರ ಶತಕ ದ ನೆರವಿನಿಂದ 223 ರನ್ ಗಳಿಸಿತು.
ಮಯಾಂಕ್ ಅಗರ್ವಾಲ್ ಕೇವಲ 26 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.ಜೊತೆಗೆ ಮಯಾಂಕ್ಗೆ ಐಪಿಎಲ್ನಲ್ಲಿ ಚೊಚ್ಚಲ ಶತಕವಾಗಿದೆ.
224 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ನಾಯಕ ಸ್ಟೀವ್ ಸ್ಮಿತ್ (50),ಸಂಜು ಸ್ಯಾಮ್ಸನ್ (85),ರಾಹುಲ್ಥೇವಾಟಿಯಾ (53) ರನ್ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ 19.3 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ಗಳಿಸಿ ಗೆಲುವಿನ ಕೇಕೆ ಹಾಕಿತು.
ರಾಹುಲ್ ತೆವಾಟಿಯಾ ಶೆಲ್ಡನ್ ಕಾಟ್ರೆಲ್ ಅವರ 18ನೇ ಓವರ್ನಲ್ಲಿ ಐದು ಸಿಕ್ಸರ್ ಚೆಚ್ಚಿ ಅಬ್ಬರಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?