Featured
ರಾಜಸ್ಥಾನ ವಿರುದ್ಧ ಆರ್ಸಿಬಿಗೆ ‘ರಾಯಲ್’ ಗೆಲುವು:ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ ಆರ್ಸಿಬಿ

ರೈಸಿಂಗ್ ಕನ್ನಡ:
ನ್ಯೂಸ್ಡೆಸ್ಕ್:
ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಅವರ ಸ್ಪಿನ್ ಮ್ಯಾಜಿಕ್ ನರೆವಿನಿಂದ ಆರ್ಸಿಬಿ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಲೊಮರೊರ್ (47),ರಾಹುಲ್ ತೆವಾಟಿಯಾ ಅಜೇಯ 24, ಜೋಶ್ ಬಟ್ಲರ್ (22) ಅಂತಮಿವಾಗಿ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಚಹಲ್ 3 ವಿಕೆಟ್, ಉದಾನಾ 2 ವಿಕೆಟ್ ಪಡೆದು ಮಿಂಚಿದರು.
155 ರನ್ಗಳ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್ಸಿಬಿ ಆರಂಭದಲ್ಲಿ ಓಪನರ್ ಆ್ಯರಾನ್ ಫಿಂಚ್ ವಿಕೆಟ್ ಪಡೆದು ಸಂಕಷ್ಟಕ್ಕೆ ಸಿಲುಕಿತು. ಮೂರನೇ ಕ್ರಮಾಂಕದಲ್ಲಿ ಬಂದ ನಾಯಕ ವಿರಾಟ್ ಕೊಹ್ಲಿ ದೇವದತ್ ಪಡಿಕ್ಕಲ್ ಜೊತೆಗೂಡಿ ರಾಜಸ್ತಾನ ಬೌಲರ್ಸ್ಗಳನ್ನ ಮನಬಂದಂತೆ ದಂಡಿಸಿದರು.
ಜಾಹೀರಾತು
ದೇವದತ್ ಪಡಿಕ್ಕಲ್ 34 ಎಸೆತದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಟೂರ್ನಿಯಲ್ಲಿ ಮೂರನೆ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು. ವಿರಾಟ್ ಕೊಹ್ಲಿ 41 ಎಸೆತದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು.
ಕೊನೆಯಲ್ಲಿ ಆರ್ಸಿಬಿ 19.1 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. ಅಂಕಪಟ್ಟಿಯಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?