Featured
ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ನಾಗೇಂದ್ರ ನಿಧನ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ನಾಗೇಂದ್ರ (87) ನಿಧನರಾಗಿದ್ದಾರೆ.
ಭಾನುವಾರ ರಾತ್ರಿ ಆರ್ ಟಿ ನಗರದ ತಮ್ಮ ಮನೆಯಲ್ಲಿಯೇ 10.30 ಸುಮಾರಿಗೆ ರಾಜನ್ ಹೃದಯಾಘಾತದಿಂದ ನಿಧನರಾದರು.
ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳ ನೂರಾರು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಚಲನಚಿತ್ರ ಸಂಗೀತವನ್ನು ಇವರು ಸಮೃದ್ಧ ಗೊಳಿಸಿದ್ದರು.
ಪುತ್ರ ಮತ್ತು ಪುತ್ರಿಯನ್ನು ಆಗಲಿದ ರಾಜನ್ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು.ಸೋಮವಾರ ಹೆಬ್ಬಾಳದ ಸ್ಮಶಾನದಲ್ಲಿ ಅಂತ್ಯಕ್ರಿಯೆ ರಾಜನ್ ಪುತ್ರ ಅನಂತ್ ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಗಂಧದಗುಡಿ, ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿಮಾತು, ಚಲಿಸುವ ಮೋಡಗಳು… ಹೀಗೆ 200ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿ 375 ಕ್ಕೂ ಅಧಿಕ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ .
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?