ಟಾಪ್ ನ್ಯೂಸ್
ಸೋಮವಾರ ಭಾರತ್ ಬಂದ್ : ಕರ್ನಾಟಕದಲ್ಲಿ ಏನಿರುತ್ತೆ.? ಏನಿರಲ್ಲ.? ಯಾರ ಯಾರ ಬೆಂಬಲ ಇದೆ.?

ರೈಸಿಂಗ್ ಕನ್ನಡ :
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರುದ್ಧ ರೈತಪರ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 27ರಂದು ಅಂದ್ರೆ ಸೋಮವಾರ, ಭಾರತ್ ಬಂದ್ ನಡೆಸಲು ನಿರ್ಧರಿಸಲಾಗಿದೆ. ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಭಾರತ್ ಬಂದ್ಗೆ ತಮಿಳುನಾಡಿನಲ್ಲಿ ಸಂಪೂರ್ಣ ಬೆಂಬಲ ಸೂಚಿಸಲಾಗಿದ್ದು, ಕರ್ನಾಟಕದಲ್ಲೂ ಭಾರತ್ ಬಂದ್ ಯಶಸ್ವಿಯಾಗುವ ಸಾಧ್ಯತೆಯಿದೆ. ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕದ ಕಬ್ಬು ಬೆಳೆಗಾರರ ಸಂಘ, ರೈತ ಸಂಘ, ಹಸಿರು ಸೇನೆ, ಹಲವು ರೈತ ಸಂಘಟನೆಗಳು ಕೂಡ ಬೆಂಬಲ ಘೋಷಿಸಿವೆ.
ದೇಶದ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್ ಬಂದ್ಗೆ ಬೆಂಬಲ ನೀಡಿವೆ. ಸೋಮವಾರ ನಡೆಯಲಿರುವ ಭಾರತ್ ಬಂದ್ನಿಂದ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರದಲ್ಲೇನೂ ವ್ಯತ್ಯಾಸ ಉಂಟಾಗುವುದಿಲ್ಲ. ಕ್ಯಾಬ್, ಆಟೋ, ಟ್ಯಾಕ್ಸಿಗಳು ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.
ಕರ್ನಾಟಕದ ಹೋಟೆಲ್ ಮಾಲೀಕರ ಸಂಘ ಈ ಭಾರತ್ ಬಂದ್ಗೆ ಬೆಂಬಲ ಘೋಷಿಸುವ ಸಾಧ್ಯತೆಯಿದೆ. ಲಾರಿ ಮಾಲೀಕರು ಕೂಡ ಬೆಂಬಲ ಘೋಷಿಸುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಭಾರತ್ ಬಂದ್ ದಿನ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ, ಆಟೋ, ಟ್ಯಾಕ್ಸಿ, ಕ್ಯಾಬ್, ಬೀದಿಬದಿ ವ್ಯಾಪಾರ, ಶಾಲಾ-ಕಾಲೇಜುಗಳು ಎಂದಿನಂತೆ ಇರಲಿವೆ.
ಭಾರತ್ ಬಂದ್ಗೆ ಸಂಯುಕ್ತ ಕಿಸಾನ್ ಮೋರ್ಚಾ, ಹಾವೇರಿ, ದಾವಣೆಗೆರ ರೈತ ಸಂಘಟನೆಗಳು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ರಾಜ್ಯ ರೈತ ಸಂಘ, ಹಸಿರು ಸೇನೆ, ಪ್ರಾಂತ್ಯ ರೈತ ಸಂಘ, ರೈತ ಕಾರ್ಮಿಕರ ಸಂಘ, ಅಖಿಲ ಭಾರತ್ ಕಿಸಾನ್ ಸಭಾ, ಆಟೋ ಮಾಲೀಕರು, ಕ್ಯಾಬ್ ಚಾಲಕರ ಸಂಘ, ಬ್ಯಾಂಕ್ ಒಕ್ಕೂಟ ನೈತಿಕ ಬೆಂಬಲ ಘೋಷಿಸಿವೆ. ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















