ರೈಸಿಂಗ್ ಕನ್ನಡ :
ಬೆಂಗಳೂರು– ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಕನ್ನಡದ ಶ್ರೇಷ್ಠ ಸಾಹಿತಿ, ನಾಟಕಕಾರ ಪ್ರೊಪೆಸರ್ ಚಂದ್ರಶೇಖರ್ ಪಾಟೀಲ್ ನಮ್ಮನ್ನಗಲಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಚಂಪಾ ಅವ್ರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ರು.
1939ರ ಜೂನ್ 18 ರಂದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ಜನಿಸಿದ್ದ ಚಂಪಾ, ಲೇಖಕ, ಪ್ರಾಧ್ಯಾಪಕ, ಅಂಕಣಕಾರ ಹಾಗೂ ಸಂಘಟನಾಕಾರರೂ ಆಗಿದ್ರು. ಬಂಡಾಯ, ನವೋದಯ ಸಾಹಿತ್ಯ ಚಳವಳಿಯಲ್ಲಿ ಸಕ್ರೀಯರಾಗಿದ್ದ ಚಂದ್ರಶೇಖರ್ ಪಾಟೀಲ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹಲವು ಹೊಸತನಗಳಿಗೆ ಮುನ್ನುಡಿ ಬರೆದಿದ್ರು.
83 ವರ್ಷ ವಯಸ್ಸಿನ ಚಂಪಾ ಇಂಗ್ಲೀಷ್ ಪ್ರಾಧ್ಯಾಪಕರಾದ್ರೂ ಕನ್ನಡದ ಮೇಲೆ ಅಗಾಧವಾದ ಹಿಡಿತ ಹೊಂದಿದ್ರು. ಬೆಂಗಳೂರಿನ ಯಲಚೇನಹಳ್ಳಿಯ ತಮ್ಮ ನಿವಾಸದಲ್ಲಿ ಚಂಪಾ ಅಸುನೀಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮುಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಾಹಿತ್ಯ ಲೋಕದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?