Connect with us

Uncategorized

ಕನ್ನಡದಲ್ಲಿ ಬರ್ತಿದೆ ಗುಜರಾತಿ ಸಿನಿಮಾ..! ರಾಯರು ಬಂದರು ಮಾವನ ಮನೆಗೆ ಟ್ರೇಲರ್ ರಿಲೀಸ್

ರೈಸಿಂಗ್ಕ ಕನ್ನಡ : ಭಾಷೆಯ ಹಂಗಿಲ್ಲ. ಪ್ಯಾನ್‌ ಇಂಡಿಯಾ ಕಾನ್ಸೆಪ್ಟ್ ಬಂದಮೇಲಂತೂ ಸಿನಿಮಾಗಳು ಭಾಷೆಯ ಗಡಿದಾಟಿವೆ. ಬೇರೆ ಬೇರೆ ಭಾಷೆಯ ಸಿನಿಮಾಗಳು ಎಲ್ಲಾ ಕಡೆ ಬಿಡುಗಡೆಯಾಗುತ್ತಿವೆ. ಈಗಾಗಲೇ ಹಿಂದಿ, ತಮಿಳು, ತೆಲುಗು ಡಬ್‌ ಆಗಿ ಕನ್ನಡದಲ್ಲಿ ಬಿಡುಗಡೆಯಾಗುತ್ತಿವೆ. ಅದರಂತೆ ಈಗ ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಜುಲೈ 7ರಂದು ರಾಯರು ಬಂದರು ಮಾವನ ಮನೆಗೆ ಚಿತ್ರ ಕನ್ನಡ ಪ್ರೇಕ್ಷಕರ ಎದುರು ಬರಲಿದೆ. ಈ ಸಿನಿಮಾವನ್ನು ಜಾಕ್‌ ಮಂಜು ತಮ್ಮದೇ ಶಾಲಿನಿ ಆರ್ಟ್‌ ಬ್ಯಾನರ್‌ ನಡಿ ಬಿಡುಗಡೆ ಮಾಡುತ್ತಿದ್ದಾರೆ. ಅದರ ಮೊದಲ ಭಾಗವಾಗಿ ಇಂದು ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಿರ್ಮಾಪಕರು ಹಾಗೂ ವಿತರಕರು ಆಗಿರುವ ಜಾಕ್ ಮಂಜು ಮಾತನಾಡಿ, ನಾವು ಕನ್ನಡ ಸಿನಿಮಾಗಳನ್ನು ಮಾಡಿ ಅನ್ಯ ಭಾಷೆಗೆ ಡಬ್ ಮಾಡಿ ಅಲ್ಲಿ ಹೋಗಿ ರಿಲೀಸ್ ಮಾಡಿ ಬಹಳಷ್ಟು ಸಿನಿಮಾಗಳು ಗೆದ್ದು ಇವತ್ತು ಕನ್ನಡ ಭಾಷೆ ಹಾಗೂ ಕನ್ನಡ ಸಿನಿಮಾಗಳಿಗೆ ರಾಜ್ಯದ ಮೂಲೆ ಮೂಲೆಗಳಲ್ಲಿ ಗೌರವ ತಂದುಕೊಟ್ಟಿವೆ. ಕಳೆದ ನಾಲ್ಕೈದು ವರ್ಷಗಳಿಂದ ಇದು ನಡೆಯುತ್ತಿದೆ. ಅದೇ ರೀತಿಯಾಗಿ ಒಂದು ಗುಜರಾತಿ ಸಿನಿಮಾ ಮಾಡಿ. ಆ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಇಲ್ಲಿ ರಿಲೀಸ್ ಮಾಡಲು ಬಂದಿದ್ದಾರೆ. ಅವರಿಗೂ ಅದೇ ರೀತಿ ಸ್ವಾಗತವನ್ನು ಕನ್ನಡಿಗರು ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ. ಎಲ್ಲಾ ಒಳ್ಳೆದಾಗುತ್ತದೆ ಎಂಬ ನಂಬಿಕೆ ಇದೆ. ಈ ಒಂದು ಸಿನಿಮಾ ಸಕ್ಸಸ್ ಆಗುವುದರಿಂದ ಬಹಳಷ್ಟು ಜನ ಇದೇ ರೀತಿ ಡಬ್ ಮಾಡಿ ನಮ್ಮ ಕರ್ನಾಟಕದಲ್ಲಿ ರಿಲೀಸ್ ಮಾಡುತ್ತಾರೆ. ಕನ್ನಡಿಗರಿಗೆ ನೋಡುವ ಅವಕಾಶ ಸಿಗುತ್ತದೆ. ನಿಮಗೆಲ್ಲಾ ಗೊತ್ತಿದೆ. ಥಿಯೇಟರ್ ಗಳು ಮುಚ್ಚುವಂತಹ ಪರಿಸ್ಥಿತಿ ಬಂದಿದೆ. ಥಿಯೇಟರ್ ಮುಚ್ಚಿದ ನಂತರ ಯಾವ ಸಿನಿಮಾ ನೋಡಲು ಥಿಯೇಟರ್ ಇರಲ್ಲ. ಯಾವ ಹೀರೋಗೂ ಕೆಲಸ ಇರಲ್ಲ ಎಂದರು.

ಕನ್ನಡದಲ್ಲಿ ಮಾತು ಆರಂಭಿಸಿದ ನಾಯಕ ತುಷಾರ್ ಸಾಧು, ಇದೊಂದು ಅದ್ಭುತ ಅನುಭವ. ನಾನು ಬೆಂಗಳೂರಿಗೆ ಎರಡನೇ ಬಾರಿ ಬಂದಿದ್ದೇನೆ. ಜಾಕ್ ಮಂಜು ಸರ್ ಇಲ್ಲದೇ ಈ ಕೆಲಸ ಆಗುತ್ತಿರಲಿಲ್ಲ ಎಂದು ತಿಳಿಸಿದರು.

ಒಂದೇ ಗುಣಗಳಿರುವ ಜೋಡಿ ಪ್ರೀತಿಸಿ ಮದುವೆಯಾಗುತ್ತಾರೆ. ಮದುವೆಯಾದ ಹುಡುಗಿ ಗಂಡನ ಮನೆಗೆ ಬರುವುದು ಕಾಮನ್. ಕೆಲವೊಮ್ಮೆ ಮನೆ ಅಳಿಯನಾಗಿ ಹೋಗುವುದು ಅಪರೂಪ.‌ ಇಲ್ಲಿ ಮನೆ ಅಳಿಯನಾಗಿ ಹೋಗುವ ನಾಯಕನ ವ್ಯಥೆ ಕಥೆ ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್‌ ಚಿತ್ರ ಕೊಟ್ಟಿರುವ ವಿಫುಲ್‌ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದ್ದು, ಶೈಲೇಶ್‌ ಧಮೇಲಿಯಾ, ಅನಿಲ್‌ ಸಂಘವಿ, ಭರತ್‌ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುರ್ಷಾ, ಕಿಂಜಲ್‌ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್‌ ಬರೋಟ್, ಜಯ್‌ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ. ಕೌಟುಂಬಿಕ ಕಥಾಹಂದರದ ರಾಯರು ಬಂದರು ಮಾವನ ಮನೆಗೆ ಸಿನಿಮಾ ಮುಂದಿಮ ತಿಂಗಳ 7ರಂದು ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ