Featured
ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ
![](https://risingkannada.com/wp-content/uploads/2023/06/image-96.png)
ಬೆಂಗಳೂರು: ಜೂ.30 ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ’ ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಚಿವರು ಸಭೆ ನಡೆಸಿ ಸೂಚನೆ ನೀಡಿದರು.
ಪ್ರತಿ ಜಿಲ್ಲೆಯಲ್ಲಿ ನೇರ ಸಾಲ ಯೋಜನೆಗೆ ಮಧ್ಯವರ್ತಿಗಳು ಹುಟ್ಟುಕೊಂಡಿದ್ದಾರೆ. ಫಲಾನುಭವಿಗಳಿಗಿಂತ ಮೊದಲೇ ಮಧ್ಯವರ್ತಿಗಳು ಫಲಾನುಭವಿಗಳ ಬಳಿ ಹೋಗುತ್ತಾರೆ. ಈ ಮಧ್ಯವರ್ತಿಗಳ ಹಾವಳಿಗೆ ಮೊದಲು ಕಡಿವಾಣ ಹಾಕಬೇಕು. ನೇರ ಸಾಲದಲ್ಲಿ ನೀಡಲಾಗುವ 50 ಸಾವಿರ ಹಣವನ್ನು ಒಬ್ಬ ಫಲಾನುಭವಿಗೆ ನೀಡಿದರೂ ಆ ಹಣ ಫಲಾನುಭವಿಗೆ ನೇರ ಉಪಯೋಗಕ್ಕೆ ಬರಬೇಕು. ಈ ಯೋಜನೆಗೆ ಹೊಸ ರೂಪ ನೀಡಿ. ಕಂತಿನ ರೂಪದಲ್ಲಾದರೂ ಫಲಾನುಭವಿಗಳಿಗೆ ಹಣ ತಲುಪುವಂತೆ ಆಗಬೇಕು ಎಂದು ಹೇಳಿದರು.
ರೈತರಿಗೆ ಅನುಕೂಲ ಮಾಡಿಕೊಡಿ: ಗಂಗ ಕಲ್ಯಾಣ ಯೋಜನೆಯಡಿ ಮೂರು ವರ್ಷದಲ್ಲಿ 19,862 ಕೊಳವೆ ಬಾವಿ ಕೊರೆಯಲು ಗುರಿ ಹಾಕಿಕೊಳ್ಳಲಾಗಿದ್ದು, ಕೇವಲ ಒಂದು ಸಾವಿರ ಕೊಳವೆ ಬಾವಿ ಕೊರೆದಿರುವುದಕ್ಕೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
![](https://risingkannada.com/wp-content/uploads/2023/06/image-97-1024x1024.png)
ಗಂಗ ಕಲ್ಯಾಣ ಯೋಜನೆಯಿಂದ ಸಾವಿರಾರು ರೈತರಿಗೆ ಉಪಯೋಗವಾಗಲಿದೆ. ಮೊದಲ ಹಂತದಲ್ಲಿ ಗಂಗ ಕಲ್ಯಾಣ ಯೋಜನೆಗೆ ಆದ್ಯತೆ ನೀಡಿ, ಹಾಕಿಕೊಂಡಿರುವ ಯೋಜನೆಯಂತೆ ಕೊಳವೆ ಬಾವಿ ಕೊರೆದು ಪೂರ್ಣಗೊಳಿಸುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಆಯುಕ್ತ ಕೆ.ದಯಾನಂದ್, ದೇವರಾಜ ಅರಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು, ಉಪ್ಪಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಕೆ.ಜಗದೀಶ್ ಕುಮಾರ್, ಅಧಿಕಾರಿಗಳಾದ ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
![](https://risingkannada.com/wp-content/uploads/2023/06/image-98-1024x1024.png)
ಬಾಕ್ಸ್ ದಂದು ವೆಚ್ಚಕ್ಕೆ ಕಡಿವಾಣ ಹಾಕಿ: ಕೆಲವೊಂದು ನಿಗಮಗಳು ಸ್ವಂತ ಕಟ್ಟಡ ಇಲ್ಲದೇ, ಖಾಸಗಿ ನಿವೇಶನಕ್ಕೆ ಲಕ್ಷಾಂತರ ರುಪಾಯಿ ಬಾಡಿಗೆ ಕಟ್ಟುವುದನ್ನು ಅಧಿಕಾರಿಗಳು ಸಚಿವರು ಗಮನಕ್ಕೆ ತಂದರು.
ಇದರಿಂದ ಅಸಮಾಧಾನಗೊಂಡ ಸಚಿವ ಶಿವರಾಜ್ ತಂಗಡಗಿ ಅವರು ಅನವಶ್ಯಕವಾಗಿ ಇಂತಹದ್ದಕ್ಕೆ ದುಂದು ವೆಚ್ಚ ಮಾಡುವುದು ಸರಿಯಲ್ಲ.
ಸ್ವಂತ ಕಟ್ಟಡದಲ್ಲೇ ನಿಗಮಗಳಿಗೆ ಸ್ಥಳ ಒದಗಿಸಿ ಬಾಡಿಗೆಗೆ ಒದಗಿಸುವ ಇಂತಹ ಹಣವನ್ನು ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಉಪಯುಕ್ತವಾಗಲಿದೆ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?