Connect with us

ದೇಶ-ವಿದೇಶ

ಪೇಟಿಎಂ ಪೇಮೆಂಟ್ಸ್ ಗೆ ಆರ್ ಬಿ ಐ ಶಾಕ್..!
ಗ್ರಾಹಕರಿಗೂ ತಟ್ಟುತ್ತಾ ನಿಷೇಧದ ಬಿಸಿ..?

ಬೆಂಗಳೂರು : ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್​ಬಿಐ ಹಲವು ನಿರ್ಬಂಧಗಳನ್ನು ವಿಧಿಸಿದೆ. ಹೊಸ ಗ್ರಾಹಕರನ್ನು ಸ್ವೀಕರಿಸಬಾರದು; ಹೊಸ ಡೆಪಾಸಿಟ್ ಪಡೆಯಬಾರದು; ಫೆಬ್ರುವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಜೋಡಿತವಾದ ವ್ಯಾಲಟ್, ಫಾಸ್​ಟ್ಯಾಗ್ ಇತ್ಯಾದಿ ಪ್ರೀಪೇಡ್ ಯಂತ್ರಗಳಿಗೆ ಟಾಪಪ್ ಹಾಕಿಸುವಂತಿಲ್ಲ ಎಂದು ಆರ್​ಬಿಐ ನಿರ್ಬಂಧ ಹಾಕಿದೆ.

ಪೇಟಿಎಂ ಆ್ಯಪ್​ಗೂ ಇದಕ್ಕೂ ಸಂಬಂಧ ಇಲ್ಲ

ಆದರೆ, ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಯಾಕೆ ನಿರ್ಬಂಧ?

ಹೊರಗಿನ ಆಡಿಟರ್​ಗಳು ಪೇಟಿಎಂ ಬ್ಯಾಂಕ್​ನಲ್ಲಿ ಆಡಿಟಿಂಗ್ ಮಾಡಿವೆ. ಬ್ಯಾಂಕಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ವಿಚಾರ ಆಡಿಟಿಂಗ್​ನಿಂದ ಗೊತ್ತಾಗಿದೆ. ಎರಡು ವರ್ಷದ ಹಿಂದೆಯೇ ಇದು ನಡೆದಿತ್ತು. 2022ರ ಮಾರ್ಚ್ ತಿಂಗಳಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಸ ಗ್ರಾಹಕರನ್ನು ಹೊಂದಬಾರದು ಎಂದು ಆರ್​ಬಿಐ ನಿರ್ಬಂಧ ಹಾಕಿತ್ತು. ಇದೀಗ 2024ರ ಫೆಬ್ರುವರಿ 29ರ ನಂತರ ಪ್ರೀಪೇಡ್ ಇನ್ಸ್​ಟ್ರುಮೆಂಟ್ಸ್, ವ್ಯಾಲಟ್ಸ್, ಫಾಸ್​ಟ್ಯಾಗ್, ಎನ್​ಸಿಎಂಸಿ ಕಾರ್ಡ್ ಇತ್ಯಾದಿಗೆ ಹಣ ರವಾನಿಸುವಂತಿಲ್ಲ, ಟಾಪಪ್ ಹಾಕುವಂತಿಲ್ಲ ಎಂದು ಆರ್​ಬಿಐ ಆದೇಶಿಸಿದೆ.



ಅದರೆ, ಈ ಮೊದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಅಕೌಂಟ್ ಹೊಂದಿರುವವರ ಖಾತೆಗೆ ಕ್ಯಾಷ್​ಬ್ಯಾಕ್, ಬಡ್ಡಿ, ರೀಫಂಡ್ ಇತ್ಯಾದಿಯನ್ನು ಹಾಕಲು ಅಡ್ಡಿ ಇಲ್ಲ. ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಸಂಪೂರ್ಣ ವಿತ್​ಡ್ರಾ ಮಾಡಿಕೊಳ್ಳಲು ಯಾವುದೇ ಅಡ್ಡಿ ಆಗಬಾರದು ಎಂದೂ ಆರ್​ಬಿಐ ಸೂಚಿಸಿದೆ. ಹಾಗೆಯೇ, ಪೇಟಿಎಂ ಮಾಲೀಕ ಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ ಮತ್ತು ಪೇಟಿಎಂ ಪೇಮೆಂಟ್ಸ್ ಸರ್ವಿಸಸ್​ನ ನೋಡಲ್ ಅಕೌಂಟ್​​ಗಳನ್ನು ಫೆಬ್ರುವರಿ 29ರೊಳಗೆ ನಿಲ್ಲಿಸುವಂತೆಯೂ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ಆರ್‌ಬಿಐ ನಿರ್ಬಂಧ ಹೇರಿದ ಬೆನ್ನಲ್ಲೇ ಪೇಟಿಎಂ ಷೇರುಗಳ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಇದರಿಂದಾಗಿ ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ. ಒಟ್ನಲ್ಲಿ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ರ ಕನಸಿನ ಪೇಟಿಎಂಗೆ ಆರ್ ಬಿ ಐ ಕೊಕ್ಕೆ ಹಾಕಿದೆ..ಮುಂದೇನಾಗುತ್ತೋ ಕಾದು ನೋಡಬೇಕು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ