Connect with us

ಬೆಂಗಳೂರು

ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯ ಆಕ್ರೋಶ : ಬಿಜೆಪಿ ಮುಖಂಡ ಬಾಬು ರಾಜೇಂದ್ರ ನಾಯಕ್​ ಪ್ರತಿಭಟನೆ

ವಿಜಯಪುರ: ಇಂದು ಮುದ್ದೇಬಿಹಾಳ ಪಟ್ಟಣದಲ್ಲಿ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಲು ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಂಜಾರ ಸಮುದಾಯದ ಮುಖಂಡರು ಹಾಗೂ ಯುವಕರು ಪ್ರತಿಭಟನೆ ನಡೆಸಿದರು.

“ಸಿದ್ದರಾಮಯ್ಯ ಸರ್ಕಾರ ಕೇವಲ ವೋಟ್ ಬ್ಯಾಂಕ್ ಗಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಾಮಾಜಿಕ ನ್ಯಾಯ ಕೇವಲ ಭಾಷಣಕಷ್ಟೇ ಸೀಮಿತವಾಗಿದೆ. ತಾನು ಹಿಂದುಳಿದ ಸಮುದಾಯದಿಂದ ಬಂದವನು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಹಿಂದುಳಿದ ಸಮಾಜವಾದ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಅವಸರ ಅವಸರವಾಗಿ ಒಳ ಮೀಸಲಾತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆ ಅವೈಜ್ಞಾನಿಕವಾಗಿದೆ. ಇದನ್ನು ರಾಜ್ಯಾದ್ಯಂತ ಬಂಜಾರ ಸಮುದಾಯ ಖಂಡಿಸಿ ಪ್ರತಿಭಟಿಸುತ್ತದೆ” ಎಂದು ಸಮುದಾಯದ ಮುಖಂಡರು, ಬಿಜೆಪಿ ನಾಯಕರಾದ ಡಾ. ಬಾಬುರಾಜೇಂದ್ರ ನಾಯಿಕ್ ಹೇಳಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಸರ್ಕಾರ ಈಗಾಗಲೇ ಮುಗಿದು ಹೋದ ಕತೆಯಾಗಿರುವ ಸದಾಶಿವ ಆಯೋಗಕ್ಕೆ ಮರು ಜೀವ ನೀಡಿ, ಆ ಮೂಲಕ ಸಮಸ್ತ ದಲಿತ ಸಮುದಾಯವನ್ನು ಒಡೆಯಲು ಪ್ರಯತ್ನ ನಡೆಸುತ್ತಿದೆ. ಇದಕ್ಕೆ ಎಚ್ಚರಿಕೆ ನೀಡಲು, ಕಪ್ಪು ಬಾವುಟ ಪ್ರದರ್ಶಿಸಲು ನಾವು ಪ್ರಯತ್ನಿಸಿದಾಗ, ಪೊಲೀಸರು ನಮ್ಮನ್ನು ಬಂಧಿಸಿದ್ದಾರೆ. ಸಿದ್ದರಾಮಯ್ಯನವರು ದಲಿತ ಸಮುದಾಯವನ್ನು ಒಡೆಯುವ ದುರಾಲೋಚನೆ ಬಿಡದಿದ್ದರೆ, ಇನ್ನು ಮುಂದೆ ಅವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಿಗೂ ತೆರಳಿ, ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ. ಅಷ್ಟೇ ಅಲ್ಲ, ಅವರ ಕಾರ್ಯಕ್ರಮ ನಡೆಯಲೂ ಬಿಡುವುದಿಲ್ಲ. ದಲಿತ ಸಮುದಾಯವನ್ನು, ಅದರಲ್ಲೂ ಹಿಂದುಳಿದ ದಲಿತ ಸಮುದಾಯವನ್ನು ತುಳಿಯುವ ಪ್ರಯತ್ನ ನಡೆಸುತ್ತಿರುವ ಸಿದ್ದರಾಮಯ್ಯನವರಿಗೆ ನಮ್ಮ ಧಿಕ್ಕಾರವಿದೆ” ಎಂದು ಅವರು ಎಚ್ಚರಿಕೆ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಬಂಜಾರ ಯುವಕರು ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಂತೆ, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಪೊಲೀಸರ ಕ್ರಮವನ್ನು ಪ್ರತಿಭಟಿಸಿದ ಬಂಜಾರ ಪ್ರತಿಭಟನಾಕಾರರು, ನ್ಯಾಯ ನೀಡಬೇಕಾಗಿರುವ ಸರ್ಕಾರ ನ್ಯಾಯ ಕೋರುವವರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂತಹ ನಡೆಗಳ ಮೂಲಕ ಕಾಂಗ್ರೆಸ್ ಸರಕಾರ ತಾನು ಜನ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಾ. ಬಸವರಾಜ್ ಚೌಹಾಣ್, ರಾಕೇಶ ರಜಪೂತ್, ಶಿವರಾಜ ರಾಠೋಡ್, ಶಿವಾನಂದ ಲಮಾಣಿ, ಮೋಹನ್ ಚವಾಣ್, ಕೃಷ್ಣ ಜಾಧವ್, ಪವನ್ ಕುಮಾರ್ ಲಮಾಣಿ ಸೇರಿದಂತೆ ಹಲವಾರು ಪ್ರತಿಭಟನಾಕಾರರು ಉಪಸ್ಥಿತರಿದ್ದು, ಬಂಧನಕ್ಕೊಳಗಾದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ