Connect with us

ದೇಶ-ವಿದೇಶ

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ

ಮೈಸೂರು : ಫೆ.10: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದರು.
ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು. ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಸಮೀಕ್ಷೆ ಆಗಿಲ್ಲ ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ:

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜೊತೆಗೆ ಅರಣ್ಯ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದರು.

Advertisement

7500 ಎಕರೆ ಅರಣ್ಯ ಭೂಮಿ ಗುತ್ತಿಗೆ:

ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು.

ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ ಮತ್ತು ಕಾನೂನು ಕೋಶವನ್ನು ರಚಿಸಲಾಗಿದೆ. ಈ ವಿಶೇಷ ತಂಡ ಗುತ್ತಿಗೆ ನೀಡಿದ ಅರಣ್ಯ ಭೂಮಿಯನ್ನು ಮರು ಪಡೆಯಲು ಕಾರ್ಯೋನ್ಮುಖವಾಗುತ್ತದೆ ಎಂದರು.

ಕೆಲವು ವರ್ಷಗಳ ಹಿಂದೆ ಹಾಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿ.ಪಿ. ರವಿ ಅವರು, ಚಾಮರಾಜನಗರದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದಾಗ ಕೆಲವು ಕಂಪನಿಗಳು ಗುತ್ತಿಗೆ ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿಲ್ಲ ಎಂದು ನೋಟಿಸ್ ನೀಡಿದ್ದರು, ಈಗ ಎಸ್ಟೇಟ್ ನವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನಾವು ಕಾನೂನು ಹೋರಾಟ ಮಾಡಲು ವಿಶೇಷ ತಂಡ ರಚಿಸಿದ್ದೇವೆ ಎಂದರು.

ಆನೆ ದಾಳಿ ಸಾವು ದುರ್ದೈವ:

Advertisement

ಕರ್ನಾಟಕದ ಅರಣ್ಯ ಇಲಾಖೆ ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿದ್ದ ಆನೆಯೊಂದು ಕೇರಳದಲ್ಲಿ ದಾಳಿ ಮಾಡಿದ್ದು, ವ್ಯಕ್ತಿಯೊಬ್ಬರು ಸಾವಿಗೀಡಾಗಿರುವುದು ಅತ್ಯಂತ ದುಃಖ ಮತ್ತು ದುರ್ದೈವದ ಸಂಗತಿಯಾಗಿದೆ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಆದರೆ ಯಾವುದೇ ವನ್ಯ ಜೀವಿಯನ್ನು ಒಂದು ರಾಜ್ಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಆನೆಗಳು ಶತ ಶತಮಾನಗಳಿಂದ ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಮುಕ್ತವಾಗಿ ಸಂಚರಿಸುತ್ತಿವೆ. ಆನೆ ಕಾರಿಡಾರ್ ಎಂದೇ ಇದಕ್ಕೆ ಕರೆಯಲಾಗುತ್ತದೆ. ಇದು ಕರ್ನಾಟಕದ ಆನೆ, ತಮಿಳುನಾಡು ಆನೆ, ಕೇರಳ ಆನೆ ಎಂದು ಬ್ರಾಂಡ್ ಮಾಡುವುದು ಸರಿಯಾದ ಕ್ರಮವಲ್ಲ ಎಂದರು.

ಪತ್ರಕರ್ತರು ಕರ್ನಾಟಕದ ಗಾಯಗೊಂಡ ಹುಲಿಯನ್ನು ಕೇರಳದ ಗಡಿಯಲ್ಲಿ ಬಿಡಲಾಗಿದೆ ಎಂಬ ಆರೋಪ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚಿರತೆ, ಹುಲಿ ಇತ್ಯಾದಿ ವನ್ಯ ಮೃಗಗಳು ಕೂಡ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗುವುದು ಸಹಜ. ವನ್ಯಜೀವಿಗಳಿಗೆ ಭಾಷೆ, ಗಡಿಯ ಮಿತಿ ಇರುವುದಿಲ್ಲ. ವನ್ಯ ಜೀವಿಗಳಿಗೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಮ್ಮ ಇಲಾಖೆ ಮತ್ತೊಂದು ರಾಜ್ಯದಲ್ಲಿ ವನ್ಯಜೀವಿ ಬಿಟ್ಟಿದೆ ಎಂಬುದು ನಿರಾಧಾರ ಆರೋಪ ಎಂದರು.

ಕಾಡ್ಗಿಚ್ಚಿನ ಬಗ್ಗೆ ಎಚ್ಚರಿಕೆ

ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯಕ್ಕೆ ಹಾನಿ ಆಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫೈರ್ ಲೈನ್ ಅಂದರೆ ಬೆಂಕಿ ರೇಖೆಯನ್ನು ನಿರ್ಮಿಸಲಾಗಿದೆ. ಅಗ್ನಿ ಶಾಮಕ ದಳದೊಂದಿಗೆ ಕೂಡ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಅಧಿಕೃತ ವರದಿ ಇದೆ. ಆದರೆ, ಇನ್ನೂ ಹೆಚ್ಚಿನ ಒತ್ತುವರಿ ಆಗಿರುವ ಬಗ್ಗೆ ದೂರುಗಳಿದ್ದು, ಒತ್ತುವರಿಯ ನಿಖರ ಮಾಹಿತಿ ನೀಡುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು. ಒತ್ತುವರಿ ತೆರವು ಮಾಡಲಾಗುವುದು ಎಂದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ