ಟಾಪ್ ನ್ಯೂಸ್
ಸಂವಿಧಾನಕ್ಕೆ 75 ವರ್ಷ: ಅರಮನೆ ಮೈದಾನದಲ್ಲಿ ಹೇಗಿದೆ ತಯಾರಿ?
ಭಾರತದ ಸಂವಿಧಾನಕ್ಕೆ 75 ವರ್ಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಮತ್ತು ಐಕ್ಯತಾ ಸಮಾವೇಶವನ್ನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ನಡೆಸಿದೆ. ಫೆ 24 ಮತ್ತು 25ರಂದು ಸಮಾವೇಶ ಅದ್ದೂರಿಯಾಗಿ ನಡೆಯಲಿದ್ದು, ರಾಜ್ಯ ಸರ್ಕಾರ ಯಾವುದೇ ಕುಂದು ಕೊರತೆಯಾಗದಂತೆ ಸಮಾವೇಶ ನಡೆಸಲು ಸೂಕ್ತ ಕ್ರಮ ಕೈಗೊಂಡಿದೆ.
ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸರಿ ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ಸಾಧ್ಯತೆ ಇದ್ದು, ಬಂದು ಹೋಗುವ ಜನರಿಗೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಲಿದೆ. ಬರುವ ಜನರಿಗೆ ಊಟದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆ ಆಯೋಜನೆ ಮಾಡಿದ್ದು, 140 ಊಟದ ಕೌಂಟರ್ ಗಳನ್ನು ತೆರೆಯಲಾಗಿದೆ. ಇನ್ನು ಬರುವ ವಾಹನಗಳಿಗೆ, ವಿಐಪಿ, ವಿವಿಐಪಿ, ಕಾರ್ಯಕರ್ತರು, ಜನಸಾಮಾನ್ಯರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ಟ್ರಾಫಿಕ್ ಸಮಸ್ಯೆ ಆಗದಂತೆ ಅರಮನೆ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ಪ್ರತಿ ಮುಖ್ಯ ರಸ್ತೆಯಲ್ಲೂ ಟ್ರಾಫಿಕ್ ಪೊಲೀಸರಿಗೆ ಸೂಕ್ತ ನಿರ್ದೆಶನ ನೀಡಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅರಮನೆ ಮೈದಾನದ ಸುತ್ತ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಇನ್ನು ಅರಮನೆ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದ್ದು, ಬರುವ ಜನರಿಗೆ ಆಸನ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದೆ. ಶಾಮಿಯಾನ, 1 ಲಕ್ಷ ಆಸನ ವ್ಯವಸ್ಥೆ, ಅಲ್ಲಲ್ಲಿ ಕುಡಿಯುವ ನೀರು, ಶೌಚಾಲಯ, ಡಸ್ಟ್ ಬಿನ್ ಗಳನ್ನು ಇಡಲಾಗಿದೆ. ವಿವಿಐಪಿ, ವಿಐಪಿ, ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?