Connect with us

ಬೆಂಗಳೂರು

ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಾಗಡಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ ಸಬಲೀಕರಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ನಾವು ನಮ್ಮ ಸರಕಾರ ಬಂದ ಮರು ಕ್ಷಣದಿಂದಲೇ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು, ಎಷ್ಟು ಜನರಿಗೆ ನಮ್ಮ ಗ್ಯಾರಂಟಿ ಯೋಜನೆ ತಲುಪಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಎಲ್ಲ ಕಡೆ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುತ್ತಿದ್ದೇವೆ. ಡಿಮೊನಿಟೈಜೇಶನ್, ಕೊರೋನಾ, ಪ್ರವಾಹ, ಬೆಲೆ ಏರಿಕೆ ಎಲ್ಲದರಿಂದಾಗಿ ತತ್ತರಿಸಿರುವ ಜನರ ಬವಣೆಯನ್ನು ನೋಡಿ, ಜನರು ಉಸಿರಾಡಲು ಅವಕಾಶ ಮಾಡಿಕೊಡೋಣ ಎಂದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ನಮ್ಮ ವಿರೋಧಿಗಳು ಇದಕ್ಕೆ ಏನೆಲ್ಲ ಹೇಳಿದರು, ಯೋಜನೆ ಜಾರಿಯಾಗುವುದೇ ಇಲ್ಲ ಎಂದರು, ಬಿಟ್ಟಿ ಯೋಜನೆ ಎಂದು ಕರೆದು ಬಡ ಜನರನ್ನು ಅವಮಾನಿಸಿದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಜನರಲ್ಲಿ ಭಯ ಮೂಡಿಸಲು ಪ್ರಯತ್ನಿಸಿದರು. ಆದರೆ, ಅಧಿಕಾರಕ್ಕೆ ಬಂದ ಮರುಕ್ಷಣವೇ ಜನರಿಗೆ ಕೊಟ್ಟ ಭಾಷೆಯಂತೆ ಯೋಜನೆ ಜಾರಿಗೆ ತಂದಿದ್ದೇವೆ, ಅತ್ಯಂತ ಸಮರ್ಥವಾಗಿ ಮುಂದುವರಿಸಿಕೊಂಡು ಬರುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Advertisement

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಿದೆ, ಜನರ ಜೀವನ ಮಟ್ಟ ಮೇಲಕ್ಕೇರಿದೆ ಎಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಪ್ರತಿ ತಿಂಗಳು ಸರಾಸರಿ ನಾಲ್ಕೂವರೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ವರ್ಷಕ್ಕೆ 54 ಸಾವಿರ ಕೋಟಿ ರೂ.ಗಳನ್ನು ನಾವು ಜನರಿಗಾಗಿ ನೇರವಾಗಿ ಬಿಡುಗಡೆ ಮಾಡುತ್ತಿದ್ದೇವೆ. ಕೇವಲ ನನ್ನ ಇಲಾಖೆಯ ಗೃಹಲಕ್ಷ್ಮೀ ಯೋಜನೆಗಾಗಿಯೇ ವರ್ಷಕ್ಕೆ 28 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸಚಿವೆ ಹೇಳಿದರು.

ಸಣ್ಣ ಪುಟ್ಟದ್ದಕ್ಕೆಲ್ಲ ಗಂಡನ ಎದುರು, ಮಕ್ಕಳ ಎದುರು ಕೈ ಚಾಚುವಂತಹ ಸ್ಥಿತಿಯಿಂದ ಮಹಿಳೆಯರನ್ನು ಪಾರು ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿ ಎಂದರು.

ಬದ್ಧತೆ ವುಳ್ಳ ಓರ್ವ ಸಂಸದ ಡಿ.ಕೆ.ಸುರೇಶ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಬದ್ದತೆ ಹಾಗೂ ಓರ್ವ ಕ್ರಿಯಾಶೀಲ ಜನ ಪ್ರತಿನಿಧಿ ಎಂದು ಹೆಬ್ಬಾಳ್ಕರ್ ಹೇಳಿದರು. ಮುಂದಿನ ಚುನಾವಣೆಯಲ್ಲೂ ಡಿ.ಕೆ.ಸುರೇಶ್ ಅವರನ್ನು ಆರಿಸಿ ಕಳುಹಿಸಿ ಎಂದು ವಿನಂತಿಸಿದರು. ಕಾಂಗ್ರೆಸ್ ಎಂದರೆ ನುಡಿದಂತೆ ನಡೆಯುವ ಪಕ್ಷ, ಕೊಟ್ಟ ಭಾಷೆಗೆ ತಪ್ಪದ ಪಕ್ಷ, ನಮ್ಮ ಜೊತೆ ನೀವಿರಿ, ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ಹೇಳಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ