ರಾಜಕೀಯ
‘‘ಪಾಕಿಸ್ತಾನ ಬಿಜೆಪಿಗೆ ಶತ್ರು ರಾಷ್ಟ್ರವಿರಬಹುದು, ಕಾಂಗ್ರೆಸ್ ಗಲ್ಲ’’ : ಹರಿಪ್ರಸಾದ್ ಹೊಸ ವಿವಾದ
![](https://risingkannada.com/wp-content/uploads/2024/02/hariprasadh.jpg)
ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು, ಸಿಎಂ ಸಿದ್ದರಾಮಯ್ಯ ವಿರುದ್ದ ಬಹಿರಂಗ ಟೀಕೆಗಳನ್ನು ಮಾಡುತ್ತಾ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯ್ಯದ್ ನಾಸಿರ್ ಹುಸೇನ್ ಗೆದ್ದ ಬಳಿಕ ನಡೆದಿದ್ದ ಸಂಭ್ರಮಾಚರಣೆಯ ವೇಳೆ ‘‘ಪಾಕಿಸ್ತಾನ ಜಿಂದಾಬಾದ್’’ ಘೋಷಣೆಗಳು ಕೇಳಿ ಬಂದಿದ್ದ ಆರೋಪ ಕೇಳಿ ಬಂದಿತ್ತು.
ಇದನ್ನು ಪ್ರಮುಖ ಅಸ್ತ್ರವಾಗಿಸಿಕೊಂಡಿರುವ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿಧಾನ ಮಂಡಲದ ಎರಡು ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಪರಿಷತ್ ನಲ್ಲಿ ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದಾಗ ಎದ್ದು ನಿಂತ ಬಿ.ಕೆ.ಹರಿಪ್ರಸಾದ್, ‘‘ಪಾಕಿಸ್ತಾನ ಬಿಜೆಪಿಗೆ ಶತ್ರು ರಾಷ್ಟ್ರವಾಗಿರಬಹುದು. ಆದರೆ ಕಾಂಗ್ರೆಸ್ ಗೆ ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ ಬದಲಿಗೆ. ಅದೊಂದು ನೆರೆಯ ದೇಶ. ಅವರು ಪಾಕಿಸ್ತಾನ ಶತ್ರು ದೇಶ ಎನ್ನುತ್ತಾರೆ.
![](https://risingkannada.com/wp-content/uploads/2024/02/bk-hariprasadh-1024x1024.jpg)
ಇತ್ತೀಚಿಗಷ್ಟೇ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗಿತ್ತು. ಅಡ್ವಾಣಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಲಾಹೋರ್ ನಲ್ಲಿ ಜಿನ್ನಾ ಸ್ಮಾರಕಕ್ಕೆ ತೆರಳಿದ್ದರು. ಅಲ್ಲದೇ, ಜಿನ್ನಾರಂತಹ ಜಾತ್ಯತೀತ ನಾಯಕರು ಮತ್ತೊಬ್ಬರಿಲ್ಲ ಎಂದು ಹೊಗಳಿದ್ದರು. ಆಗ ಪಾಕಿಸ್ತಾನ ಶತ್ರು ರಾಷ್ಟ್ರವಾಗಿರಲಿಲ್ಲವೇ’’ ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಈ ಕುರಿತು ಎಕ್ಸ್ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಗಿ ಬಿದ್ದಿದ್ದು, ‘‘ನೆಹರೂ-ಜಿನ್ನಾಕಾಲದಿಂದ ಕಾಂಗ್ರೆಸ್-ಪಾಕಿಸ್ತಾನದ ನಡುವೆ ಇದ್ದ ಸ್ನೇಹ ಸಂಬಂಧ ಇತ್ತೀಚಿನ ತಲೆಮಾರಿನವರೆಗೆ ಹಾಗೆ ಉಳಿದುಕೊಂಡಿದೆ ಎಂಬುದಕ್ಕೆ ಹರಿಪ್ರಸಾದ್ ಉತ್ತಮ ಸಾಕ್ಷ್ಯ’’ ಎಂದು ಕುಟುಕಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?