ಸಿನಿಮಾ
ನನಸಾಗದ ಕನಸು ಅಗಲಿದ ಕೆ. ಶಿವರಾಮ್
ಚಾಮರಾಜನಗರ: ನಿವೃತ್ತ ಐಎಎಸ್ ಅಧಿಕಾರಿ, ಚಲನಚಿತ್ರ ನಟ, ರಾಜಕಾರಣಿ, ದಲಿತ ಹೋರಾಟಗಾರ ಕೆ.ಶಿವರಾಮ್ ಈ ಬಾರಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು, ಆದರೆ ತಮ್ಮ ಕನಸು ಈಡೇರುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.. ಕನ್ನಡದಲ್ಲಿ ಐಎಎಸ್ ಬರೆದು ಉತ್ತೀರ್ಣರಾದ ಭಾರತದಲ್ಲಿಯೇ ಮೊಟ್ಟ ಮೊದಲಿಗ ಕರುನಾಡ ಪುತ್ರ ಕೆ.ಶಿವರಾಂ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ.?
ರಾಮನಗರ ಜಿಲ್ಲೆಯ ಉರಗವಳ್ಳಿ ಗ್ರಾಮದಲ್ಲಿ ಏಪ್ರಿಲ್ 06, 1953ರಲ್ಲಿ ಜನಿಸಿದ ಕೆ.ಶಿವರಾಂ, 1982ರಲ್ಲಿ ಮೈಸೂರಿನ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ 1985ರಲ್ಲಿ ಕನ್ನಡದಲ್ಲಿ ಐಎಎಸ್ ಬರೆದು ಪಾಸ್ ಮಾಡಿದ ಮೊದಲ ಕನ್ನಡಿಗ ಎಂಬ ಹಿರಿಮೆಗೆ ಪಾತ್ರರಾದರು.
ಐಎಎಸ್ ಅಧಿಕಾರಿಯಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಕೆ.ಶಿವರಾಂ, 1993ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ಅವರ “ಬಾ ನಲ್ಲೆ ಮಧು ಚಂದ್ರಕೆ” ಚಿತ್ರದ ಮೂಲಕ ಚಲನಚಿತ್ರ ನಟರಾಗಿಯೂ ಹೊರ ಹೊಮ್ಮಿದರು, ಸುಮಾರು 10 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಾಯಕ ನಟನಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು.
2013ರಲ್ಲಿ ಐಎಎಸ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಕೆ.ಶಿವರಾಂ, ದಲಿತ ಮುಖ್ಯಮಂತ್ರಿ ಕೂಗಿನೊಂದಿಗೆ ಡಾ.ಜಿ.ಪರಮೇಸ್ವರ್ ಬೆಂಬಲಿಸಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ರಂಗ ಪ್ರವೇಶಿಸಿದರು, ಆದರೆ ಕಾಂಗ್ರೆಸ್ ನಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ 2014ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲಿನ ರುಚಿಯನ್ನು ಅನುಭವಿಸಿದರು.
ಬಳಿಕ ದಲಿತ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಕೆ.ಶಿವರಾಂ, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿ ಇಡೀ ರಾಜ್ಯವನ್ನು ಸುತ್ತುವ ಮೂಲಕ ಛಲವಾದಿ ಸಮುದಾಯದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.ನಂತರ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದ ಕೆ.ಶಿವರಾಂ, 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಆದರೆ ವಿಧಿಯಾಟ ಕೆ.ಶಿವರಾಂ ಅವರ ಸಂಸತ್ ಪ್ರವೇಶದ ಕನಸಿಗೆ ಅಂತ್ಯಹಾಡಿದ್ದು, ಹೃದಯಾಘಾತದ ರೂಪದಲ್ಲಿ ಬಂದ ಜವರಾಯ ಕೆ.ಶಿವರಾಂ ಜನಪ್ರತಿನಿಧಿಯಾಗುವ ಕನಸನ್ನು ನುಚ್ಚುನೂರು ಮಾಡಿದ್ದಾನೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?