ಬೆಂಗಳೂರು
ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ಐಆರ್ !

ಬಳ್ಳಾರಿ: ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿ ಶ್ರೀನಿವಾಸ್ ರಂಗ ರೆಡ್ಡಿ ಎಂಬುವವರು 2024ರ ಜ.8ರಂದು ಗಾಂಧಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಸಂಜ್ಞೆಯ (ಎನ್ಎ– ನಾನ್ ಕಾಗ್ನಿಸೆಬಲ್) ಪ್ರಕರಣ (ಸಂಖ್ಯೆ 02/2024) ದಾಖಲಿದ್ದ ಪೊಲೀಸರು, ತನಿಖೆಗೆ ಅನುಮತಿ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಕೋರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಇತ್ತೀಚೆಗೆ ಆದೇಶಿಸಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ಮಾ.7ರಂದು ಪ್ರಜಾ ಪ್ರತಿನಿಧಿ ಕಾಯ್ದೆ– 1951, 1988ರ ಸೆಕ್ಷನ್ 125 (ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮಿ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅಫಿಡವಿಟ್ನಲ್ಲಿ ಅವರು ತಮ್ಮ ವಾಹನಗಳ ಮತ್ತು ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಆರೋಪಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?