Connect with us

ಬೆಂಗಳೂರು

ನೀರಿನ ದಂಧೆ ತಡೆಯಲು ಕ್ರಮ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು “ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ.

ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಖಾಸಗಿ ನೀರಿನ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದು ನೀರು ಪೂರೈಸಲು ಮುಂದಾಗಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ ಮೆಂಟ್ ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮರು ಕೊರೆಯುವುದು, ಹೊಸ ಕೊಳವೆ ಬಾವಿ ಕೊರೆಯಲು ತೀರ್ಮಾನಿಸಿದ್ದೇವೆ ಎಂದರು.

ಮಾಧ್ಯಮಗಳು ತೋರಿಸುತ್ತಾರೆ ಎಂದು ಬಿಜೆಪಿಯವರು ನೀರಿನ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಅನುದಾನ ಇಟ್ಟಿದ್ದ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದಿದ್ದು ಯಾಕೆ? ಕೇಂದ್ರ ಸರ್ಕಾರದ ಬಳಿ ಎಲ್ಲಾ ಸಂಸದರು ಹೋಗಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರುವುದು ನಮ್ಮ ವಿರುದ್ಧವಲ್ಲ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಹೇಳಿದರು.

ಬಿಜೆಪಿಗೆ ದೇಶದ ಐಕ್ಯತೆ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ಅನಂತ ಕುಮಾರ್ ಹೆಗಡೆ ಅವರನ್ನು ಉಚ್ಛಾಟನೆ ಮಾಡಬಹುದಾಗಿತ್ತು. ಸಂವಿಧಾನ ನಮ್ಮ ಪಾಲಿನ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಆಗಿದೆ” ನಾಯಕರು ಚುನಾವಣಾ ಸಮಿತಿ ಸಭೆ ನಡೆಸಿ ನಮ್ಮ ಪ್ರಸ್ತಾವನೆಯನ್ನು ಒಪ್ಪಬಹುದು ಅಥವಾ ನಿರಾಕರಿಸಬಹುದು ಎಂದು ಹೇಳಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ