Connect with us

ಬೆಂಗಳೂರು

ಲೋಕಸಭಾ ಚುನಾವಣೆಯೇ ಸರಿಯಾದ ಸಮಯ – Dr K ಸುಧಾಕರ್

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಚುನಾವಣಾ ಪ್ರಚಾರವನ್ನು ದೇವನಹಳ್ಳಿಯಿಂದ ಆರಂಭಿಸಲಿದ್ದಾರೆ. ಇಂತಹ ಸಮಯದಲ್ಲಿ ಎಲ್ಲ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಕಾಂಗ್ರೆಸ್‌ಗೆ ಉತ್ತರ ನೀಡಲು ಈ ಚುನಾವಣೆಯೇ ಸರಿಯಾದ ಸಮಯ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ದೇವನಹಳ್ಳಿಗೆ ಮಾರ್ಚ್‌ 15 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರವನ್ನು ದೇವನಹಳ್ಳಿಯಿಂದಲೇ ಆರಂಭಿಸುತ್ತಿದ್ದಾರೆ. ಪ್ರತಿ ದಿನ ಮೂರ್ನಾಲ್ಕು ರಾಜ್ಯಗಳಿಗೆ ಅವರು ಭೇಟಿ ನೀಡಲಿದ್ದಾರೆ. ಭಾರತೀಯರು ಹೆಮ್ಮೆ ಪಡುವಂತೆ ಅವರು ಕೆಲಸ ಮಾಡಿದ್ದಾರೆ. 500 ವರ್ಷಗಳಾದರೂ ರಾಮ ಮಂದಿರವನ್ನು ಯಾರೂ ಕಟ್ಟಲು ಸಾಧ್ಯವಾಗಲಿಲ್ಲ. ಆದರೆ ಮೋದಿ ಆ ಕೆಲಸ ಮಾಡಿದ್ದಾರೆ. ಪ್ರತಿ ರೈತರ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ನೀಡುತ್ತಿದ್ದಾರೆ. ಅಂತಹ ಪ್ರಧಾನಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬರುತ್ತಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಬೇಕು. ಬಿಜೆಪಿ ಮುಖಂಡರು ಬೂತ್‌ಗಳಲ್ಲಿ ಸಭೆ ನಡೆಸಿ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು ಎಂದು ಹೇಳಿದರು.

ದೇಶದಲ್ಲಿ ಎರಡು ಸಂವಿಧಾನ ಇರಬಾರದು. ಆದರೆ ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಸಂವಿಧಾನದಿಂದಾಗಿ ಜಮೀನು ಖರೀದಿಸಲು ಕೂಡ ಸಾಧ್ಯವಿರಲಿಲ್ಲ. ಕಾಂಗ್ರೆಸ್‌ ನಾಯಕರು ತುಷ್ಟೀಕರಣ ರಾಜಕಾರಣ ಮಾಡಿ ಒಂದೇ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ ಪ್ರಧಾನಿ ಮೋದಿ ಎಲ್ಲರನ್ನೂ ಸಮಾನವಾಗಿ ಕಂಡು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆಡಳಿತ ಪಾತಾಳಕ್ಕೆ ಹೋಗಿದೆ. ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೇಳಿಬಂದಿದೆ. ಆದರೆ ಆ ರಾಜ್ಯಸಭಾ ಸದಸ್ಯರು, ಕಾಂಗ್ರೆಸ್‌ ನಾಯಕರು ಕ್ಷಮೆ ಕೇಳಿಲ್ಲ ಎಂದರು.

ಕುಕ್ಕರ್‌ನಲ್ಲಿ ಬಾಂಬ್‌ ಇಟ್ಟವರನ್ನು ಬ್ರದರ್‌ಗಳು ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಪಾಕಿಸ್ತಾನಕ್ಕೆ ಜೈಕಾರ ಹಾಕಿಲ್ಲ ಎಂದೇ ಈ ನಾಯಕರು ವಾದ ಮಾಡಿದ್ದರು. ಒಂದು ಕಡೆ ಬರ, ಮತ್ತೊಂದು ಕಡೆ ಬೆಲೆ ಏರಿಕೆ, ಇನ್ನೊಂದು ಕಡೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್‌ ಸರ್ಕಾರದ ಇಂತಹ ಅನ್ಯಾಯಗಳಿಗೆ ಉತ್ತರ ನೀಡಲು ಲೋಕಸಭಾ ಚುನಾವಣೆಯೇ ಸರಿಯಾದ ಸಮಯ ಎಂದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ