Connect with us

ಕ್ರೀಡೆ

ಟೀಂ ಇಂಡಿಯಾಗೆ ಕಂಬ್ಯಾಕ್​ ಮಾಡಲು ಇದೇ ಲಾಸ್ಟ್​ ಚಾನ್ಸ್​; ಐಪಿಎಲ್​ನಲ್ಲೂ ಮಿಸ್ ಆದ್ರೆ ಪರ್ಮನೆಂಟ್​​ ಔಟ್​!

Cricket : ಬಿಸಿಸಿಐ ಈ ಬಾರಿ ಹಲವಾರು ಸ್ಟಾರ್ ಕ್ರಿಕೆಟಿಗರ ಭಾರತ ತಂಡದಿಂದ ದೂರ ಮಾಡಿದೆ. ಅವರಲ್ಲಿ ಅನೇಕ ದೊಡ್ಡ ಆಟಗಾರರಾಗಿದ್ದರು. ಆದರೆ ಇದೀಗ ಅವರುಗಳು ಟೀಂ ಇಂಡಿಯಾದಿಂದ ದೂರವಿದ್ದರೂ ಐಪಿಎಲ್​ ಮೂಲಕ ಕಂಬ್ಯಾಕ್​ ಮಾಡಬಹುದಾಗಿದೆ.

ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿದೆ. ಈ ಐಪಿಎಲ್ ಸೀಸನ್ ಕೆಲವು ಭಾರತೀಯ ಕ್ರಿಕೆಟಿಗರಿಗೆ ಬಹಳ ಮಹತ್ವದ್ದಾಗಿದೆ.

ಹೌದು, ಬಿಸಿಸಿಐ ಈ ಬಾರಿ ಹಲವಾರು ಸ್ಟಾರ್ ಕ್ರಿಕೆಟಿಗರ ಹೆಸರನ್ನು ತಮ್ಮ ಪಟ್ಟಿಯಲ್ಲಿ ಇಟ್ಟುಕೊಂಡಿಲ್ಲದ ಪರಿಣಾಮವಾಗಿ, ಅವರಲ್ಲಿ ಅನೇಕ ದೊಡ್ಡ ಹೆಸರುಗಳು ಈ ವರ್ಷ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಮರಳಿ ಪಡೆಯಲು ಸಜ್ಜಾಗಿದ್ದಾರೆ.

ಪ್ರತಿ ವರ್ಷದ ಐಪಿಎಲ್​ ಬಳಿಕ ಅನೇಕ ಯುವ ಪ್ರತಿಭೆಗಳು ಭಾರತೀಯ ತಂಡಕ್ಕೆ ಸೇರಿಕೊಳ್ಳುತ್ತಾರೆ. ಅದೇ ರೀತಿ ಅನೇಕ ಆಟಗಾರರು ಮತ್ತೆ ಭಾರತ ತಂಡಕ್ಕೆ ಕಂಬ್ಯಾಕ್​ ಮಾಡಲು ಐಪಿಎಲ್​ ಸಹಾಯಕವಾಗಿದೆ. ಕಳೆದ ಸೀಸನ್​ ಬಳಿಕ ಹಾರ್ದಿಕ್​ ಪಾಂಡ್ಯ ಭಾರತ ತಂಡಕ್ಕೆ ಮತ್ತಷ್ಟು ಬಲಿಷ್ಠವಾಗಿ ಮರಳಿದ್ದರು.

ಅಲ್ಲದೇ ಈ ವರ್ಷ ಐಪಿಎಲ್​ ಬಳಿಕ ಟಿ20 ವಿಶ್ವಕಪ್​ ಇರುವುದರಿಂದ ಐಪಿಎಲ್​ ಎಲ್ಲಾ ಆಟಗಾರರಿಗೆ ಅತ್ಯಂತ ಮಹತ್ವದ್ದಾಗಿದ್ದು, ಇಲ್ಲಿ ಮಿಂಚಿದರೆ ಮಾತ್ರ ಟೀಂ ಇಂಡಿಯಾ ಬಾಗಿಲು ತೆರೆಯಲಿದೆ. ಅದರಲ್ಲಿಯೂ ಈಗಾಗಲೇ ತಂಡದಲ್ಲಿ ಕಾಣಿಸಿಕೊಂಡು ಇದೀಗ ದೂರವಾಗಿರುವ ಆಟಗಾರರಿಗೆ ಇದು ಲಾಸ್ಟ್​ ಚಾನ್ಸ್​ ಎನ್ನುವಂತಾಗಿದೆ.

ಪೃಥ್ವಿ ಶಾ ರಾಷ್ಟ್ರೀಯ ತಂಡದ ಜೆರ್ಸಿಯಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಆಡಿದ್ದಾರೆ. ಅವರು 17 ಡಿಸೆಂಬರ್ 2020ರಂದು ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಿದರು. ODI ಪಂದ್ಯವನ್ನು 5 ಫೆಬ್ರವರಿ 2020ರಂದು ನ್ಯೂಜಿಲೆಂಡ್ ವಿರುದ್ಧ ಆಡಿದ್ದರು. ಪೃಥ್ವಿ 2021ರಲ್ಲಿ ಶ್ರೀಲಂಕಾ ವಿರುದ್ಧ ಒಂದು ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲಿಲ್ಲ. ಐಪಿಎಲ್ 2024ರಲ್ನ ಅವರ ಪ್ರದರ್ಶನದಿಂದ ಮಾತ್ರ ಅವರು ರಾಷ್ಟ್ರೀಯ ತಂಡಕ್ಕೆ ಮರಳುವುದನ್ನು ಖಚಿತಪಡಿಸಬಹುದು.

ಭಾರತ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಕಳೆದ ವರ್ಷ ಆಗಸ್ಟ್ 13ರಂದು ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕೊನೆಯ ಪಂದ್ಯವನ್ನು ಆಡಿದ್ದರು. ಆ ಬಳಿಕ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಯುಜುವೇಂದ್ರ ಅವರು ಐಪಿಎಲ್‌ನಲ್ಲಿ ಪ್ರದರ್ಶನ ನೀಡಿವ ಮೂಲಕ ಮತ್ತೆ ಭಾರತ ತಂಡಕ್ಕೆ ಕಂಬ್ಯಾಕ್​ ಮಾಡಲು ಸಜ್ಜಾಗಿದ್ದಾರೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ