Connect with us

ಬೆಂಗಳೂರು

ಜನರಲ್ಲಿ ದ್ವೇಷ ಮೂಡಿಸಿ ದೇಶ ಒಡೆಯುವುದೇ ಬಿಜೆಪಿ ಕೆಲಸ

ಬೆಂಗಳೂರು: ದೇಶದ ಜನ‌ ಸಮುದಾಯದಲ್ಲಿ‌ ಅಲ್ಪಸಂಖ್ಯಾತರ ಬಗ್ಗೆ ದ್ವೇಷ ಮೂಡಿಸಿ, ದೇಶ‌ ಒಡೆಯುವುದೇ ಬಿಜೆಪಿಯವರ ಆದ್ಯತೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ನಡೆದ‌ ಜಯಪ್ರಕಾಶ್ ಹೆಗ್ಡೆ, ಸುಕುಮಾರ್ ಶೆಟ್ಟಿ ಹಾಗೂ ಎಂ.ಪಿ.ಕುಮಾರಸ್ವಾಮಿ‌ ಅವರು‌ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ‌ ಅವರು ಮಾತನಾಡಿದರು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಬಡವರ‌ ಏಳಿಗೆಗಾಗಿ ಒಂದೊಳ್ಳೆ ರಾಷ್ಟ್ರೀಯ ಯೋಜನೆಯನ್ನು ನೀಡಲಾಗಿಲ್ಲ. ಬಡವರನ್ನು ಮತ್ತಷ್ಟು ಕೆಟ್ಟ ಪರಿಸ್ಥಿತಿಗೆ ತಳ್ಳಲಾಗುತ್ತಿದೆ. ಅಲ್ಪಸಂಖ್ಯಾತರ ಬಗ್ಗೆ ದ್ವೇಷ ಮೂಡಿಸಿ ದೇಶ ಒಡೆಯುವುದನ್ನೆ ಆದ್ಯತೆ ಎಂದುಕೊಂಡಿರುವ ಬಿಜೆಪಿಯವರು ಇನ್ನೆಷ್ಟು ದಿನ ಅಧಿಕಾರದಲ್ಲಿರಬೇಕು‌.‌ ಇಂತವರಿಗೆ ಪಾಠ ಕಲಿಸಲು 2024ರ ಲೋಕಸಭಾ ಚುನಾವಣೆ ಪ್ರಸ್ತುತವಾಗಿದೆ ಎಂದರು.

ದೇಶದ ರಾಜಕಾರಣ ಕವಲುದಾರಿಯಲ್ಲಿದೆ. ಸ್ವಾತಂತ್ರ್ಯ ಬಂದ ನಂತರ ರಾಜಕೀಯ ಇಂತಹ ಹಾದಿಗೆ ಹೋಗಿರಲಿಲ್ಲ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿಯೂ ಇಷ್ಟೊಂದು ಕೆಟ್ಟ ಪರಿಸ್ಥಿತಿಗೆ ಹೋಗಿರಲಿಲ್ಲ.‌ ಆದರೆ, ಪ್ರಸ್ತುತ ದೇಶದ ರಾಜಕಾರಣ ವಿಭಜನೆಯ ರಾಜಕಾರಣವಾಗುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ‘ಪ್ರಪಂಚದ ಯಾವುದೇ ದೇಶದಲ್ಲಿ ಇಲ್ಲದ ಸಂವಿಧಾನವನ್ನು ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ. ಅವರು ನೀಡಿದ ಸಂವಿಧಾನದಿಂದ ನಾನು ಪ್ರಧಾನ ಮಂತ್ರಿಯಾಗಿದ್ದೇನೆ’ ಎಂದು ಹೇಳಿಕೆ‌ ನೀಡಿದ್ದಾರೆ. ಆದರೆ, ಮೋದಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

Advertisement

ದೇಶದಲ್ಲಿ ರಾಜಕೀಯ ವಾತಾವರಣ ಬದಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸವಿದೆ. ಬಿಜೆಪಿಗೆ ಬುದ್ಧಿ ಕಲಿಸಬೇಕು ಎಂದು ಜನ ಕಾಯುತ್ತಿದ್ದಾರೆ. ಕಳೆದ ಹತ್ತು ವರ್ಷದಿಂದ ನಮಗೆ ಏನು ಒಳ್ಳೆಯದಾಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. 28 ಕ್ಷೇತ್ರಗಳ ಪೈಕಿ ಕನಿಷ್ಟ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.

2023ರಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಪ್ರವಾಸ ಮಾಡಿದರು. ಭ್ರಷ್ಟಚಾರ ಬಿರುದು ಪಡೆದಿದ್ದ ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಪ್ರತಿ ಹಳ್ಳಿಯನ್ನು ಸುತ್ತಿದರು. ಬಡವರ ಪರವಾಗಿ ಕಾಂಗ್ರೆಸ್ ಪಕ್ಷ ಎಂದಿಗೂ ನಿಂತಿದೆ. ಬಡವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಭರವಸೆ ನೀಡಿದರು. ಗ್ಯಾರಂಟಿ ಕಾರ್ಡ್‌ಗಳನ್ನು ಹಳ್ಳಿಹಳ್ಳಿಯಲ್ಲಿ ಮನೆಮನೆಗೆ ತಲುಪಿಸಿದಾಗ, ವಿಪಕ್ಷದವರಿಂದ ಟೀಕಿಸಿದರು. ಆದರೆ, ಜನ ನಮ್ಮ‌ ಪಕ್ಷವನ್ನು ಒಪ್ಪಿ 135 ಸೀಟುಗಳನ್ನು ನೀಡಿದರು. ಲೋಕಸಭೆ ಚುನಾವಣೆಯನ್ನು‌ ಪ್ರತಿಯೊಬ್ಬರು ಸವಾಲಾಗಿ ತೆಗೆದುಕೊಂಡು ಕೆಲಸ‌ ಮಾಡಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹ್ಮದ್, ಸಚಿವರಾದ ಕೆ.ಜೆ.ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ವಿಧಾನಪೆಇಷತ್ ಸದಸ್ಯ ಯು.ಬಿ.ವೆಂಕಟೇಶ್, ಶಾಸಕರಾದ ಎಚ್.ಡಿ.ತಮ್ಮಯ್ಯ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಪಿ.ಟಿ.ಪರಮೇಶ್ವರ್ ನಾಯ್ಕ್, ರಾಜಶೇಖರ್ ಪಾಟೀಲ್, ಆಯನೂರು ಮಂಜುನಾಥ್ ಅವರು ಸೇರಿದಂತೆ ಮತ್ತಿತರರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ