Connect with us

ಬೆಂಗಳೂರು

ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ

Bengalore : ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.

ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.

ಮತದಾರರು ಹಾಗೂ ಕಾಂಗ್ರೆಸ್ ನಾಯಕರು ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ನಾವು ನಾಯಕರು ನೆಪ ಮಾತ್ರ. ನಾವು ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ.

ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರಿಗೆ ತಾಲೂಕು ಮಟ್ಟದಲ್ಲಿ ಕಚೇರಿ ಹಾಗೂ 25 ಸಾವಿರ ಗೌರವಧನ, ಜಿಲ್ಲಾ ಸಮಿತಿ ಅಧ್ಯಕ್ಷರಿಗೆ ಜಿಲ್ಲಾ ಮಟ್ಟದಲ್ಲಿ ಕಚೇರಿ ಹಾಗೂ 50 ಸಾವಿರ ಗೌರವಧನ ನೀಡಲಾಗುವುದು. ರಾಜ್ಯ ಮಟ್ಟದ ಸಮಿತಿಯಲ್ಲಿ ಓರ್ವ ಅಧ್ಯಕ್ಷರು ಹಾಗೂ ಐವರು ಉಪಾಧ್ಯಕ್ಷರನ್ನು ಒಳಗೊಂಡಿದೆ. ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ ನೀಡಲಾಗುವುದು. ಆಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ.

Advertisement

ಇದರ ಜತೆಗೆ ಕಾರ್ಯಕರ್ತರುಗಳಿಗೆ ಸ್ಥಳೀಯ ಮಟ್ಟದ ಆಸ್ಪತ್ರೆ, ಶಾಲಾ ಹಾಗೂ ಇತರೆ ಸಮಿತಿ ಸಮಿತಿಯಲ್ಲಿ ಸ್ಥಾನಮಾನ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇವರು ಸಾರ್ವಜನಿಕರ ಸೇವೆ ಮಾಡಬೇಕು, ಅವರಿಗೆ ಗೌರವ ನೀಡಲು ತೀರ್ಮಾನಿಸಿದ್ದೇವೆ. ನಾವು ಚುನಾವಣೆಗಾಗಿ ಗ್ಯಾರಂಟಿ ಯೋಜನೆ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕಿನಲ್ಲಿ ನೆರವು ನೀಡಲು ಜಾರಿ ಮಾಡಿದ್ದೇವೆ.

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಕಾರ್ಮಿಕರಿಂದ ಬಸ್ ಪ್ರಯಾಣಕ್ಕೆ ಮೂರು ಪಟ್ಟು ಹಣ ಕೀಳಲು ಮುಂದಾದರು. ಆಗ ನಾನು ಸಿದ್ದರಾಮಯ್ಯ ಅವರು ಚರ್ಚೆ ಮಾಡಿ ಸರ್ಕಾರಕ್ಕೆ 1 ಕೋಟಿ ರೂಪಾಯಿ ಚೆಕ್ ನೀಡಿ ಆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ತಲುಪಿಸಲು ಆಗ್ರಹಿಸಿದೆವು. ನಂತರ ಸರ್ಕಾರ ವಿಧಿ ಇಲ್ಲದೆ ಒಂದು ವಾರ ಉಚಿತ ಬಸ್ ಪ್ರಯಾಣ ಕಲ್ಪಿಸಿತು. ಕೇಂದ್ರ ಸರ್ಕಾರ ಉಚಿತ ರೈಲು ಸೇವೆ ಆರಂಭಿಸಿತು.

ಈ ರೀತಿ ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ನಮಗೆ ಮತ ಮುಖ್ಯ ಅಲ್ಲ. ನಾವು ಬ್ಯಾಂಕುಗಳ ರಾಷ್ಟ್ರೀಕರಣ, ಅನ್ನಭಾಗ್ಯ, ಉಳುವವನಿಗೆ ಭೂಮಿ, ಬಡವರಿಗೆ ಮನೆ, ನಿವೇಶನ ನೀಡಿದ್ದೇವೆ. ನಮ್ಮ ಯೋಜನೆಗಳು ಯಾವುದೇ ಒಂದು ಜಾತಿ, ಧರ್ಮ, ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲಾ ವರ್ಗದ ಜನರಿಗೆ ನೀಡಲಾಗುವುದು.

ಅಭಿವೃದ್ಧಿಗೆ 1.26 ಲಕ್ಷ ಕೋಟಿ ಅನುದಾನ

ಇನ್ನು ನಮ್ಮ ಸರ್ಕಾರ ಮಂಡಿಸಿರುವ 3.74 ಲಕ್ಷ ಕೋಟಿ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊರತಾಗಿ ಅಭಿವೃದ್ಧಿ ಯೋಜನೆಗಳಿಗೆ 1.26 ಲಕ್ಷ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಕನ್ನಡದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಎಲ್ಲಾ ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡ ಭಾಷೆ ಬಳಕೆ ಮಾಡುವ ಬಗ್ಗೆ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ.

Advertisement

ನೀರಿನ ಅಭಾವ ನೀಗಿಸುತ್ತೇವೆ ಬರ ಪರಿಸ್ಥಿತಿಯಲ್ಲಿ ಬೆಂಗಳೂರಿನಲ್ಲಿ 7 ಸಾವಿರ ಕೊಳವೆ ಬಾವಿಗಳು ಬತ್ತಿದ್ದು ಇದರಿಂದ ಕೆಲವು ಕಡೆ ನೀರಿನ ಅಭಾವ ಎದುರಾಗಿದೆ. ಉಳಿದ ಕಡೆ ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ.

ರಾಜ್ಯದ ಇತರೆ ಭಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಅವರಿಗೆ ಹಣ ನೀಡಲಾಗಿದೆ. ನೀರಿನ ಅಭಾವದ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಇದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವರು ಸಭೆ ಮಾಡಿ ಚರ್ಚಿಸುತ್ತಿದ್ದಾರೆ. ಮುಂದಿನ ಎರಡು ಮೂರು ತಿಂಗಳು ನೀರಿನ ಅಭಾವ ಸೃಷ್ಟಿಯಾಗಿದ್ದು, ಎಲ್ಲೆಲ್ಲಿಂದ ನೀರನ್ನು ಪೂರೈಸಬಹುದು ಎಂದು ಗುರುತಿಸಿ ಟ್ಯಾಂಕರ್ ಗಳ ಮೂಲಕ ಪೂರೈಸಲಾಗುವುದು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ