ರಾಜಕೀಯ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿಸ್ಚಾರ್ಜ್
ಬೆಂಗಳೂರು : ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ವೈದ್ಯರ ಸೂಚನೆ ಮೇರೆಗೆ ಮೂರು ದಿನಗಳ ಹಿಂದೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಬೆಳಗ್ಗೆ ಎಂಟು ಗಂಟೆಗೆ ನುರಿತ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ. ಇದೀಗ ಕುಮಾರಸ್ವಾಮಿ ಆವರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮುಂದಿನ ಒಂದು ವಾರದಲ್ಲಿ ಫಿಟ್ ಅಂಡ್ ಫೈನ್ ಆಗಿ ಲೋಕಸಭೆ ಪ್ರಚಾರ ಕಣಕ್ಕೆ ಧುಮುಕಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಹೆಚ್ಡಿ ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಜೆಡಿಎಸ್ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಆಗಲಿದೆ.
ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಖುದ್ದಾಗಿ ಕಣಕ್ಕೆ ಇಳಿಯುವ ಸಂಭವ ಇದೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೇ 2019ರ ಎಲೆಕ್ಷನ್ ರೀತಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?