Connect with us

ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಬ್ಯಾಟ್ ಹಿಡಿಯಲು ಪಾಠ ಹೇಳಿದ ಅನಿಲ್ ಕುಂಬ್ಳೆ!

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಪ್ ಆರ್ಡರ್ ನಲ್ಲಿ ಬ್ಯಾಟ್ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ. ಮಾರ್ಚ್ 27 ರಂದು ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ ಪೈಪೋಟಿ ಎದುರಿಸಲು ಸಜ್ಜಾಗಿದೆ.

ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್, ಯುವ ನಾಯಕ ಶುಭಮನ್ ಗಿಲ್ ಕ್ಯಾಪ್ಟನ್ಸಿಯ ಗುಜರಾತ್ ಟೈಟನ್ಸ್ ವಿರುದ್ಧ 6 ರನ್ ಗಳ ಸೋಲು ಕಂಡಿದ್ದು, ಗೆಲುವಿನ ಲಯಕ್ಕೆ ಮರಳಲು ಹೊರಟಿದೆ.

ಜಿಯೋ ಸಿನಿಮಾ ಜೊತೆ ಸ್ಪಿನ್ ದಿಗ್ಗಜ ಅನಿಲ್ ಸಂವಾದ ನಡೆಸಿದ್ದು, 169 ರನ್ ಗಳ ಗುರಿ ಹಿಂಬಾಲಿಸಿದ್ಧ ಮುಂಬೈ ಇಂಡಿಯನ್ಸ್ 162 ರನ್ ಗಳಿಗೆ ಸೀಮಿತಗೊಂಡು 6 ರನ್ ಗಳಿಂದ ಸೋಲು ಕಾಣಲು ಹಾರ್ದಿಕ್ ಪಾಂಡ್ಯ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದು ಪ್ರಮುಖ ಕಾರಣವಾಗಿದೆ. ಪಂದ್ಯದಲ್ಲಿ ಕೊನೆಯ 5 ಓವರ್ ಗಳಲ್ಲಿ ತಂಡಕ್ಕೆ ಗೆಲ್ಲಲು 43 ರನ್ ಅವಶ್ಯಕತೆ ಇತ್ತು.

ವಿಶ್ವದ ಐಷಾರಾಮಿ ಟಿ20 ಕ್ರಿಕೆಟ್ ಲೀಗ್ ನಲ್ಲಿ ಗುಜರಾತ್ ಟೈಟನ್ಸ್ ಪರ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಎಲ್ಲರನ್ನೂ ಚಕಿತಗೊಳಿಸಿದ್ದರು. ಆದರೆ ಮುಂಬೈ ಇಂಡಿಯನ್ಸ್ 12 ಎಸೆತಗಳಲ್ಲಿ ಗೆಲ್ಲಲು 25 ರನ್ ಗಳ ಅವಶ್ಯಕತೆ ಇದ್ದಾಗ ಹಾರ್ದಿಕ ಪಾಂಡ್ಯ ಕ್ರೀಸ್ ಗೆ ಬಂದಿದ್ದರು.

“ಮುಂಬೈ ಇಂಡಿಯನ್ಸ್ ಪ್ರಸಕ್ತ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಅತ್ಯುತ್ತಮ ಸ್ಥಿತಿಯಲ್ಲಿತ್ತು. ಕೊನೆಯ 5 ಓವರ್ ಗಳಲ್ಲಿ ಗೆಲ್ಲಲು 43 ರನ್ ಬೇಕಿದ್ದು 7 ವಿಕೆಟ್ ಉಳಿದಿದ್ದವು. ಅವರು ಪಂದ್ಯವನ್ನು ಅಂತಿಮ ಓವರ್ ಗಳವರೆಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು. ಟಿ20 ಕ್ರಿಕೆಟ್ ನಲ್ಲಿ ಹಾರ್ದಿಕ್ ಪಾಂಡ್ಯ ಮೇಲ್ಪಂಕ್ತಿಯಲ್ಲಿ ಬಂದು ಬ್ಯಾಟ್ ಮಾಡಬೇಕು.

ನೀವು ಚೇಸ್ ಮಾಡುವಾಗ ಪಂದ್ಯವನ್ನು 19 ಓವರ್ ಗಳಲ್ಲೇ ಮುಗಿಸಲು ಪ್ರಯತ್ನಿಸಬೇಕು. 20ನೇ ಓವರ್ ಗಳವರೆಗೆ ತೆಗೆದುಕೊಂಡು ಹೋಗಲು ನೋಡಬಾರದು. ಹಿಂದಿನ ಪಂದ್ಯದ ಸೋಲಿನಿಂದ ಮುಂಬೈ ಇಂಡಿಯನ್ಸ್ ತಮ್ಮ ತಪ್ಪನ್ನು ಅರಿತುಕೊಂಡು ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕು,” ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

Advertisement
00

ಐಪಿಎಲ್ ಟೂರ್ನಿಯ 17ನೇ ಸೀಸನ್ ನಲ್ಲಿ ಬುಧವಾರ (ಮಾರ್ಚ್ 27) ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ರನ್ ಗಳಿಂದ ಸೋಲು ಕಂಡಿರುವ ಪ್ಯಾಟ್ ಕಮ್ಮಿನ್ಸ್ ಸಾರಥ್ಯದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸವಾಲು ಎದುರಿಸಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ