ಬೆಂಗಳೂರು : ಹೈದರಾಬಾದ್ ಕರ್ನಾಟಕವನ್ನ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೊಸದಾಗಿ ನಾಮಕರಣ ಮಾಡಿ ಆದೇಶ ಹೊರಡಿಸಿರೋದ್ರಿಂದ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಹಾಗೂ ಬಳ್ಳಾರಿಯನ್ನ ಒಳಗೊಂಡ ಆರು ಜಿಲ್ಲೆಗಳು ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಬರಲಿವೆ. ಈ ಮಧ್ಯೆ, ಈಗ ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವಂತೆ ಮನವಿ ಹಾಗೂ ಒತ್ತಾಯ ಕೇಳಿ ಬರ್ತಿದೆ.
ಬೆಳಗಾವಿ ಜಿಲ್ಲೆ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದೆ. ಹೈದ್ರಾಬಾದ್ ಕರ್ನಾಟಕವನ್ನ ಕಲ್ಯಾಣ ಕರ್ನಾಟಕ ಎಂದು ಮಾಡಿರುವುದು ಖುಷಿಯ ವಿಚಾರ. ಅದರಂತೆ, ಮುಂಬೈ ಕರ್ನಾಟಕವನ್ನೂ ಕೂಡ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಿ ಎಂದು ಕ್ರಿಯಾ ಸಮಿತಿ ಪತ್ರದಲ್ಲಿ ಮನವಿ ಮಾಡಿದೆ. ಇದರಿಂದ ಈ ಭಾಗದ ಕನ್ನಡಿಗರು ಹೆಚ್ಚು ಖುಷಿ ಮಾಡ್ತಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪತ್ರದ ಜೊತೆ ರಾಜಕೀಯ ನಾಯಕರು, ಸಂಘಟನೆಗಳ ಮುಖಂಡರು ಕೂಡ ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಒತ್ತಾಯ ಮಾಡ್ತಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೆ ಅನ್ನೋದನ್ನ ಕಾದುನೋಡಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?