Featured
ಶಿವಮೊಗ್ಗ ರೈಲ್ವೇ ಹೆಚ್ಚುವರಿ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ಸಚಿವ ಸುರೇಶ ಅಂಗಡಿ ಜತೆ ಬಿಎಸ್‌ವೈ ಚರ್ಚೆ
![](https://risingkannada.com/wp-content/uploads/2019/09/ಡಡಡ.jpg)
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೇ ಯೋಜನಗೆಳು ಮತ್ತು ಬೆಂಗಳೂರು ಸಬರ್ಬನ್ ರೈಲು ಹಾಗು ಮೆಟ್ರೋ ರೈಲುಗಳ ಕಾಮಗಾರಿ ಮತ್ತು ಯೋಜನೆಗಳ ಕುರಿತು ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಹಾಗು ಇತರೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಶಿವಮೊಗ್ಗ ರೈಲು ಯೋಜನೆಗಳ ಬಗ್ಗೆ ಹೆಚ್ಚು ಚರ್ಚೆ ನಡೆಸಲಾಯಿತು, ಇದರಲ್ಲಿ ಪ್ರಮುಖವಾಗಿ ಶಿವಮೊಗ್ಗ ಔಟರ್ ರಿಂಗ್ ರಸ್ತೆ ಸಮೀಪದಲ್ಲಿ ರಸ್ತೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಜಾಗ ನೀಡಲು ಒಪ್ಪಿಗೆ, ಶಿವಮೊಗ್ಗ – ಶಿಕಾರಿಪುರ – ರಾಣೆ ಬೆನ್ನೂರು ಹೊಸ ರೈಲ್ವೆ ಮಾರ್ಗದ ಆರಂಭಿಕ ಕೆಲಸಕ್ಕೆ ಒಪ್ಪಿಗೆ, ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲು ಸಂಚಾರ ಚೆನ್ನೈವರೆಗೆ ವಿಸ್ತರಣೆಗೆ ತಾತ್ವಿಕ ಒಪ್ಪಿಗೆ, ಶಿವಮೊಗ್ಗ – ತಿರುಪತಿ ರೈಲನ್ನ ಬೀರೂರು, ಚಿತ್ರದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲು ತಾತ್ವಿಕ ಒಪ್ಪಿಗೆ, ಶಿವಮೊಗ್ಗ ಮತ್ತು ಯಶವಂತಪುರ ನಡುವೆ ಸಂಚಾರ ನಡೆಸುವ ಶತಾಬ್ದಿ ರೈಲಿನ ಸಮಯ ಬದಲಾವಣೆ ಕುರಿತು ಚರ್ಚಿಸಲಾಯಿತು.
ಬೀರೂರು – ಶಿವಮೊಗ್ಗ ರೈಲು ಮಾರ್ಗದ ಡಬ್ಲಿಂಗ್ ಕಾಮಗಾರಿ ಸದ್ಯದಲ್ಲೇ ಆರಂಭಿಸಲು ಸೂಚನೆ, ಬೆಂಗಳೂರು ಸಬರ್ಬನ್ ರೈಲು ಯೋಜನೆ ಬಗ್ಗೆ ಚರ್ಚೆ ನಡೆಸಲಾಯಿತು, ಮೆಟ್ರೋ ಕಾಮಗಾರಿಗಳಿಗೆ ರೈಲ್ವೆ ಇಲಾಖೆಯು ಸಹಕರಿಸುವಂತೆ ಮನವಿ ಮಾಡಲಾಯಿತು.
You may like
ಸಚಿವ ಸಂಪುಟದಲ್ಲಿ ನನ್ನ ಹಸ್ತಕ್ಷೇಪ ಇಲ್ಲ : ಆದ್ರೆ, ವಲಸಿಗರಿಗೆ ಮಂತ್ರಿ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ
ಮಗನ ಜೊತೆ ನಡ್ಡಾ, ರಾಜನಾಥ್ ಭೇಟಿಯಾದ ಯಡಿಯೂರಪ್ಪ : ಬದಲಾವಣೆ ಮುನ್ಸೂಚನೆನಾ.?
ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ
ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆಯೋ.? ಪುನಾರಚನೆಯೋ..? : ಮಿನಿಸ್ಟರ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಉತ್ಸಾಹ..!
ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ : ರಾಜ್ಯ ಬಿಜೆಪಿಯಲ್ಲಿ ತಲ್ಲಣ, ಮತ್ತೆ ಸಿಎಂ ಬದಲಾವಣೆ ಚರ್ಚೆ