ನವದೆಹಲಿ : ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿದ್ದಾರೆ. ಇದರಿಂದಾಗಿ ತೈಲ ಉತ್ಪಾದನೆ ಕುಂಠಿತವಾಗಿದ್ದು, ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಇದರ ನೇರ ಪರಿಣಾಮ ಭಾರತದ ಮೇಲೆ ಬೀಳಲಿದ್ದು, ಮುಂದಿನ 10-15 ದಿನಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಬರೋಬ್ಬರಿ ಲೀಟರ್ಗೆ 5 ರಿಂದ 6 ರೂಪಾಯಿ ಹೆಚ್ಚಾಗುವ ಸಾಧ್ಯತೆ ಇದೆ. ಕಚ್ಚಾತೈಲ ಒಂದು ಬ್ಯಾರೆಲ್ಗೆ 72 ಡಾಲರ್ಗೆ ಏರಿಕೆಯಾಗಿದೆ.
ಈ ನಡುವೆ, ಸೌದಿ ಅರೇಬಿಯಾದಲ್ಲಿ ಉತ್ಪಾದನೆ ಕಡಿತವಾದರೂ, ಭಾರತದ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಹೇಳಿದೆ. ಪ್ರಪಂಚದಲ್ಲಿ ಭಾರತ ತೈಲ ಆಮದು ಮಾಡಿಕೊಳ್ಳುವ ಮೂರನೇ ಅತೀ ದೊಡ್ಡ ರಾಷ್ಟ್ರ. ಹೀಗಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ ಎಂದು ಪ್ರೆಟ್ರೋಲಿಯಂ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?