Featured
15 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ : ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಮೈಸೂರು : ದೆಹಲಿಯಲ್ಲಿ ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗ್ತಿದ್ದಂತೆ, ಜೆಡಿಎಸ್ ಫುಲ್ ಆ್ಯಕ್ಟೀವ್ ಆಗಿದೆ. ಮೈಸೂರಿನಲ್ಲಿ ಮಾತ್ನಾಡಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಎಲ್ಲಾ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ನಿಲ್ಲಿಸಲಿದೆ ಎಂದು ಘೋಷಿಸಿದ್ರು.
ಹೆಚ್.ಡಿ. ಕುಮಾರಸ್ವಾಮಿ ಘೋಷಣೆಯಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಖತಂ ಅನ್ನೋದು ಗೊತ್ತಾಗಿದೆ. ಇದರಿಂದಾಗಿ ಕಾಂಗ್ರೆಸ್ ನಾಯಕರಲ್ಲೂ ಕೊಂಚ ಭಯ ಶುರುವಾದಂತೆ ಕಾಣ್ತಿದೆ. ಯಾಕಂದ್ರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆಗೆ ಹೋಗೋದ್ರಿಂದ, ಬಿಜೆಪಿಗೆ ಲಾಭವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಕುಮಾರಸ್ವಾಮಿ ಇದೇ ನಿರ್ಧಾರದ ಮೇಲೆ ನಿಂತ್ರೆ ಬಿಜೆಪಿಗೆ ಲಾಭವಾಗಬಹುದು.
ಎಲೆಕ್ಷನ್ ಘೋಷಣೆ ಆಗ್ತಿದ್ದಂತೆ ಕುಮಾರಸ್ವಾಮಿ ದಿಢೀರ್ ಈ ನಿರ್ಧಾರ ಘೋಷಿಸಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಚರ್ಚೆ ನಡೆಸ್ತಾರಾ..? ಮತ್ತೆ ಒಂದಾಗಿ ಚುನಾವಣೆಗೆ ಹೋಗ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















