Featured
#ByElection : ಸಿದ್ದರಾಮಯ್ಯ ನಾಟಕ ನನಗೆ ಗೊತ್ತಿದೆ : ಸಿದ್ದು ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ..!

ಬೆಂಗಳೂರು : ಉಪ ಚುನಾವಣೆ ಬರ್ತಿದ್ದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರ ವಾಕ್ಸಮರ ಜೋರಾಗಿಯೇ ನಡೀತಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ದೇವೇಗೌಡರ ಸೋಲು, ಮಂಡ್ಯದಲ್ಲಿ ನಮ್ಮ ಸೋಲು ಮತ್ತು ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣ ಯಾರು ಅಂತ ಸಿದ್ದರಾಮಯ್ಯ ಹೇಳಲಿ ಎಂದು ಸವಾಲ್ ಹಾಕಿದ್ದಾರೆ.
ಹೊಸಕೋಟೆಯಲ್ಲಿ ಸಿದ್ದರಾಮಯ್ಯ ಸ್ವಾಭಿಮಾನದ ಭಾಷಣ ಮಾಡಿದ್ದನ್ನ ನೋಡಿದ್ದೇನೆ. ಮಂಡ್ಯದಲ್ಲಿ ಬಿಜೆಪಿ ಜೊತೆ ಸೇರಿಕೊಂಡು ಏನೆಲ್ಲಾ ಮಾಡ್ತಿದ್ದಾರೆ ಅನ್ನೋದು ಗೊತ್ತು. ಇವರ ನಾಟಕ ನನಗೆ ಗೊತ್ತಿದೆ ಎಂದು ಸಿದ್ದು ವಿರುದ್ಧ ಹೆಚ್ಡಿಕೆ ಕೆಂಡಾಮಂಡಲರಾಗಿದ್ದಾರೆ. ಅಲ್ಲದೆ, ಮೈಸೂರಿನಲ್ಲಿ ಕಾಂಗ್ರೆಸ್ ಸೋಲು, ಸಿದ್ದರಾಮಯ್ಯ ಅವ್ರ ಸ್ವಯಂಕೃತ ಅಪರಾಧ ಎಂದು ಕುಮಾರಸ್ವಾಮಿ ಕಿಡಿಕಾರಿದ್ರು.
ಲೋಕಸಭೆ ಸೋಲಿಗೆ ಕಾಂಗ್ರೆಸ್ ಸೋಲು ಅಂತ ನಾನು ಹೇಳೋದಿಲ್ಲ. ನಾನು ಮಾಡಿದ ತಪ್ಪಿನಿಂದ ಸೋಲಾಯ್ತು ಅಂತ ಹೇಳ್ತೀನಿ ಎಂದಿರೋ ಹೆಚ್.ಡಿ. ಕುಮಾರಸ್ವಾಮಿ, ಮಂಡ್ಯದಲ್ಲಿ ಕಬ್ಬು ಬೆಳೆಗಾರರು ಸಾಯ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರ ಸ್ವಾಭಿಮಾನ ಎಲ್ಲಿ ಹೋಯ್ತು ಎಂದು ಆಕ್ರೋಶ ಹೊರಹಾಕಿದ್ದಾರೆ ಕುಮಾರಸ್ವಾಮಿ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?