Featured
ಡಿಕೆ ಶಿವಕುಮಾರ್ಗೆ ಇವತ್ತೇ ಜಡ್ಜ್ಮೆಂಟ್ ಡೇ : ಜಾಮೀನು ಸಿಗುತ್ತಾ..? ಇಲ್ಲ ತಿಹಾರ್ ಜೈಲೇ ಗತಿನಾ..?
ನವದೆಹಲಿ/ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರೋ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ತೀರ್ಪು ಇವತ್ತು ಹೊರಬೀಳಲಿದೆ. ಕಳೆದ ಹಲವು ದಿನಗಳಿಂದ ಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆದಿದ್ದು, ಇವತ್ತು ಮಧ್ಯಾಹ್ನ 3 ಗಂಟೆಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
ಜಾಮೀನು ಸಿಗುತ್ತೆ ಅನ್ನೋ ಭರವಸೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಇದ್ದು, ಜೈಲಿಂದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಕೋರ್ಟ್ನಲ್ಲಿ ಬಲವಾದ ವಾದ ಮಂಡಿಸಿದ ಇಡಿ. ಪ್ರಭಾವ ಬಳಸಿ ಸಾಕ್ಷ್ಯಗಳನ್ನ ನಾಶ ಮಾಡುವ ಸಾಧ್ಯತೆ ಇದ್ದು ಯಾವುದೇ ಕಾರಣಕ್ಕೂ ಡಿಕೆಶಿಗೆ ಜಾಮೀನು ಬೇಡ ಎಂದು ಇಡಿ ವಕೀಲರು ವಾದ ಮುಂದಿಟ್ಟಿದ್ದಾರೆ.
ಆದ್ರೆ, ಡಿಕೆಶಿ ಪರ ಮುಕುಲ್ ರೋಹಟಗಿ ಹಾಗೂ ಅಭಿಷೇಕ್ ಸಿಂಘ್ವಿ ವಾದ ಮಂಡನೆ ಮಾಡಿದ್ದು, ಈ ಪ್ರಕರಣದಲ್ಲಿ ಜಾಮೀನು ನೀಡಬಹುದು. ಜಾಮೀನು ನೀಡಬಹುದಾದ ಪ್ರಕರಣ ಇದಾಗಿದ್ದು, ಡಿಕೆ ಶಿವಕುಮಾರ್ ವಿಮಾನ ಹಾರಿ ಎಲ್ಲೂ ಹೋಗುವುದಿಲ್ಲ. ನಿಮ್ಮ ಯಾವುದೇ ಷರತ್ತುಗಳಿಗೆ ನಾವು ಬದ್ಧರಾಗಿ ಇರ್ತೇವೆ. ಹೀಗಾಗಿ, ಜಾಮೀನು ನೀಡಬೇಕು ಎಂದು ವಾದ ಮಂಡಿಸಿದ್ದಾರೆ.ವಾದ-ಪ್ರತಿವಾದ ಆಲಿಸಿರೋ ನ್ಯಾಯಾಲಯಾ ಇವತ್ತು ಮಧ್ಯಾಹ್ನ ತೀರ್ಪು ಪ್ರಕಟಿಸಲಿದೆ. ಹೀಗಾಗಿ, ಎಲ್ಲರ ಚಿತ್ತ ನವದೆಹಲಿಯತ್ತ ನೆಟ್ಟಿದ್ದು, ಡಿಕೆಶಿಗೆ ಬೇಲಾ..? ಇಲ್ಲಾ ಜೈಲಾ ಅನ್ನೋ ಕುತೂಹಲ ಎಲ್ಲರನ್ನ ಕಾಡ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?