Connect with us

Featured

ರೋಹಿಣಿ ಸಿಂಧೂರಿ ವರ್ಗಾವಣೆಗೆ ಏನು ಕಾರಣ..? ನಿಜಕ್ಕೂ ಕಾರ್ಮಿಕ ಇಲಾಖೆಯಲ್ಲಿ ಆಗ್ತಿರೋದು ಏನು..?

ಬೆಂಗಳೂರು : ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಯಾವಾಗಲು ಸುದ್ದಿಯಲ್ಲಿ ಇರ್ತಾರೆ. ಹಾಸನ ಡಿಸಿ ಆಗಿದ್ದಾಗ ಹಲವು ಬಾರಿ ವರ್ಗಾವಣೆ ಗೊಂಡು, ಬಳಿಕ ತಡೆಯಾಜ್ಞೆಯಾದ ಉದಾಹರಣೆಗಳು ನಮ್ಮ ಮುಂದಿವೆ. ಆದ್ರೀಗ, ರೋಹಿಣಿ ಸಿಂಧೂರಿ ಕರ್ನಾಟಕ ಕಲ್ಯಾಣ ಮಂಡಳಿ ಕಾರ್ಯಕರ್ಶಿ ಸ್ಥಾನದಿಂದಲೂ ವರ್ಗಾವಣೆ ಆಗಿರೋದು ಸಾಕಷ್ಟು ಚರ್ಚೆ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಆಗಿದ್ದು ಯಾಕೆ..? ಅವರು ಸರಿಯಾಗಿ ಕೆಲಸ ಮಾಡ್ತಾ ಇರಲಿಲ್ವಾ..? ಅಥವಾ ಕಾರ್ಮಿಕ ಇಲಾಖೆಯ ಮಾಫಿಯಾದಿಂದ ವರ್ಗಾವಣೆ ಆಯ್ತಾ..? ಹೀಗೆ ಸಾಕಷ್ಟು ಪ್ರಶ್ನೆಗಳ ಜೊತೆ ಅನುಮಾನಕ್ಕೆ ಎಡೆ ಮಾಡಿದೆ. ಈ ಮಧ್ಯೆ, ಸರ್ಕಾರ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಗೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್​ ಪತ್ರ ಬರೆದಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆಗೂ ತಮಗೂ ಸಂಬಂಧ ಇಲ್ಲ. ಸಹಾಯವಾಣಿ ನಿರ್ಮಿಸಲು ಕಿಯೋನಿಕ್ಸ್​​ಗೆ ಟೆಂಡರ್ ಕೊಡಲೂ ಕೂಡ ನಾನು ಹೇಳಿಲ್ಲ. ಕಾನೂನು ಪ್ರಕಾರ ಟೆಂಡರ್ ಕರೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದ್ರೆ, ಕೆಲವು ಅಧಿಕಾರಿಗಳು, ಟೆಂಡರ್ ವಿಚಾರದಲ್ಲಿ ರೋಹಿಣಿ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನಲಾಗಿದೆ. ಅಕ್ರಮಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ರೋಹಿಣಿ ವರ್ಗವಾಗಿದೆ ಅನ್ನೋ ಆರೋಪವೂ ಕೇಳಿ ಬರ್ತಿದೆ.

ರೋಹಿಣಿಯವರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕೆಲಸ ಮಾಡುವ ಇಚ್ಛೆ ಇದ್ದರೆ ಅವಕಾಶ ಕೊಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟದ್ದು. ವರ್ಗಾವಣೆಗೂ ನನಗೂ ಸಂಬಂಧ ಇಲ್ಲ ಮಣಿವಣ್ಣನ್​ ಪತ್ರ ಬರೆದಿದ್ದಾರೆ.

Advertisement

ರೋಹಿಣಿ ಸಿಂಧೂರಿ ಮೇಲಿನ ಆರೋಪವೇನು…?

ರೋಹಿಣಿ ಸಿಂಧೂರಿ ಕರ್ನಾಟಕ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿದ್ದಾಗ ಕಾರ್ಮಿಕರ ಪರ ಕೆಲಸ ಮಾಡಲಿಲ್ಲ ಎಂಬ ಆರೋಪವಿದೆ. 1600ಕ್ಕೂ ಹೆಚ್ಚು ಕಾರ್ಮಿಕರು ರಾಜ್ಯದಲ್ಲಿ ಆಕಸ್ಮಿಕ ಅಪಘಾತದಿಂದ ಮೃತಪಟ್ಟರೂ ಪರಿಹಾರ ನೀಡಿಲ್ಲ. ರೋಹಿಣಿ ಸಿಂಧೂರಿಯವರೇ 600 ಕಡತಗಳನ್ನ ನೋಡಿದ್ದರೂ ಪರಿಹಾರ ನೀಡಿಲ್ಲ ಎಂದು ದೂರು ನೀಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪಗೂ ಕಾರ್ಮಿಕ ಸಂಘಟನೆಗಳು ಪತ್ರ ಬರೆದಿದ್ದವು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸಿಲ್ಕ್ ಬೋರ್ಡ್​​​ಗೆ ವರ್ಗಾವಣೆ ಮಾಡಲಾಗಿದೆ.

ಟೆಂಡರ್ ಗೋಲ್ ಮಾಲ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲು ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸಲಾಗಿದೆ ಎನ್ನಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ