Featured
BIG BREAKING : ಕರ್ನಾಟಕದಲ್ಲಿ ಉಪ ಚುನಾವಣೆಯೇ ರದ್ದು : ಅನರ್ಹ ಶಾಸಕರಿಗೆ ಬಿಗ್ ರಿಲೀಫ್
ನವದೆಹಲಿ : ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆಯಾಗಿದ್ದ ಉಪ ಚುನಾವಣೆ ತಾತ್ಕಾಲಿಕವಾಗಿ ರದ್ದಾಗಿದೆ. ಇದರಿಂದಾಗಿ 15 ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅನರ್ಹ ಶಾಸಕರ ಪ್ರಕರಣ ಮುಗಿಯೋವರೆಗೆ ಚುನಾವಣೆಗೆ ತಡೆ ನೀಡಿ, ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅಕ್ಟೋಬರ್ 22ರಂದು ಮತ್ತೆ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ನಡೆಯಲಿದೆ.
ಉಪ ಚುನಾವಣೆ ರದ್ದಾಗಿರೋದ್ರಿಂದ ಸಹಜವಾಗಿಯೇ ಅನರ್ಹ ಶಾಸಕರು ಖುಷಿಯಾಗಿದ್ದಾರೆ. ಅಲ್ಲದೆ, ಅನರ್ಹ ಶಾಸಕರ ಪ್ರಕರಣ ಇತ್ಯರ್ಥ ಆಗೋವರೆಗೆ ಚುನಾವಣೆ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರಿಂದಾಗಿ ನಿಟ್ಟುಸಿರು ಬಿಟ್ಟಿರೋ ಅನರ್ಹ ಶಾಸಕರು, ಅಕ್ಟೋಬರ್ 22ರ ಬಳಿಕ ಕೇಸ್ ಇತ್ಯರ್ಥ ಆಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ.
ಅಕ್ಟೋಬರ್ 22ರ ಬಳಿಕ ಅನರ್ಹ ಶಾಸಕರ ಕೇಸ್ ಇತ್ಯರ್ಥವಾದ್ರೆ, ಬಹುಶಃ ಜನವರಿಯಲ್ಲಿ 17 ಕ್ಷೇತ್ರಗಳಿಗೆ ಚುನಾವಣೆ ನಡೆಯಬಹುದು. ಜನವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆ ಚುನಾವಣೆ ಜೊತೆ ರಾಜ್ಯದಲ್ಲೂ ಉಪ ಚುನಾವಣೆ ಘೋಷಣೆಯಾಗಬಹುದು. ಸದ್ಯ, ಅನರ್ಹ ಶಾಸಕರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಮಧ್ಯೆ, ಬಿಜೆಪಿ, ಕಾಂಗ್ರೆಸ್ಗೆ ಎದುರಾಗಿದ್ದ ಬಂಡಾಯ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತೆ. ಅದರಲ್ಲೂ ಬಿಜೆಪಿಗೆ ಎದುರಾಗಿದ್ದ ಬಂಡಾಯ ಭೀತಿ ಶಮನಕ್ಕೆ ನಾಯಕರಿಗೆ ಟೈಮ್ ಸಿಕ್ಕಂತಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?