Featured
ಡಿಕೆಶಿ ಆಯ್ತು..! ಈಗ ಪರಮೇಶ್ವರ್ : ಹಾಗಿದ್ರೆ ಮುಂದಿನ ಟಾರ್ಗೆಟ್ ಯಾರು..?
ಬೆಂಗಳೂರು : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅದ್ಯಾಕೋ ಏನೋ ಕರ್ನಾಟಕವನ್ನೇ ಟಾರ್ಗೆಟ್ ಮಾಡಿಕೊಂಡಂತೆ ಕಾಣ್ತಿದೆ. ಅದರಲ್ಲೂ ಕಾಂಗ್ರೆಸ್ ನಾಯಕರಿಗೆ ಟೈಮ್ ಸರಿ ಇದ್ದಂತೆ ಕಾಣ್ತಿಲ್ಲ. ಈಗಾಗ್ಲೇ ಮಾಜಿ ಸಚಿವ, ಕಾಂಗ್ರೆಸ್ನ ಟ್ರಬಲ್ ಶೂಟರ್ ಆಗಿದ್ದ ಡಿಕೆ ಶಿವಕುಮಾರ್ ತಿಹಾರ್ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಡಿಸಿಎಂ, ಡಾ.ಜಿ. ಪರಮೇಶ್ವರ್ ಅವರ ನಿವಾಸ ಹಾಗೂ ಕಚೇರಿ ಮೇಲೆ ನಡೆದಿರೋ ಐಟಿ ದಾಳಿ ಸಾಕಷ್ಟು ಊಹಾಪೋಹಗಳಿಗೆ ಎಡೆ ಮಾಡಿದೆ.
ಆದಾಯ ತೆರಿಗೆ ಅಧಿಕಾರಿಗಳು ಡಾ.ಜಿ. ಪರಮೇಶ್ವರ್ ಅವರಿಗೆ ಸೇರಿದ ಸಿದ್ಧಾರ್ಥ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಮನೆ, ಕಚೇರಿ ಹಾಗೂ ಆಪ್ತರ ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಪರಿಶೀಲನೆ ಹಾಗೂ ವಿಚಾರಣೆ ನಡೆಸಿದ್ದಾರೆ. ಪರಮೇಶ್ವರ್ ಮೇಲಿನ ದಾಳಿಯನ್ನ ರಾಜಕೀಯ ಪ್ರೇರಿತ ಅಂತ ಕಾಂಗ್ರೆಸ್ ನಾಯಕರು ಕರೆದಿದ್ದಾರೆ. ಸ್ವತಃ ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಪರಮೇಶ್ವರ್, ನಾವು ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಲಿ. ನಾವು ಯಾವುದೇ ತಪ್ಪು ಮಾಡಿಲ್ಲ. ಶಿಕ್ಷಣ ಸಂಸ್ಥೆ ಹೊರತು ಪಡಿಸಿ, ಬೇರೆ ಯಾವುದೇ ಬ್ಯುಸಿನೆಸ್ ಮಾಡ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಐಟಿ ದಾಳಿ ವಿಚಾರವಾಗಿ ಖಾರವಾಗಿಯೇ ಮಾತ್ನಾಡಿರೋ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ. ಇಡೀ ದೇಶದಲ್ಲಿ ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಐಟಿ, ಇಡಿ ದಾಳಿ ಆಗ್ತಿದೆ. ಯಾಕೆ, ಬಿಜೆಪಿ ನಾಯಕರು ಇವರಿಗೆ ಕಾಣಿಸೋದಿಲ್ವಾ..? ಕೇವಲ ಕಾಂಗ್ರೆಸ್ ನಾಯಕರ ಮೇಲೆ ಯಾಕೆ ದಾಳಿ ಆಗ್ತಿದೆ. ಇದು ಪಕ್ಕಾ ರಾಜಕೀಯ ಪ್ರೇರಿತ ದಾಳಿ ಅಲ್ಲದೇ ಮತ್ತೇನು ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೇಕು ಅಂತಲೇ ರಾಜಕೀಯವಾಗಿ ಕೇಂದ್ರದ ಅಧೀನದಲ್ಲಿರೋ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇಷ್ಟೇ ಅಲ್ಲದೆ, ಪರಮೇಶ್ವರ್ ಮೇಲಿನ ದಾಳಿಯನ್ನ ಬಹುತೇಕ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಈ ನಡುವೆ, ಡಿಕೆಶಿ ಆಯ್ತು.. ಪರಮೇಶ್ವರ್ ಮೇಲೆ ದಾಳಿ ನಡೆದಿದ್ದು ಇದು ಯಾವ ಹಂತಕ್ಕೆ ಹೋಗುತ್ತೋ ಗೊತ್ತಿಲ್ಲ. ಮುಂದಿನ ಟಾರ್ಗೆಟ್ ಯಾರು ಅನ್ನೋ ಚರ್ಚೆ ಕೂಡ ಶುರುವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?