Featured
ಬಂಡೀಪುರ ಆಯ್ತು ಈಗ ಬಿಳಿಗಿರಿರಂಗನ ಬೆಟ್ಟದಲ್ಲೂ ಹುಲಿ ಭೀತಿ..!

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಅಭಯಾರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹುಲಿ ಭೀತಿ ಹೆಚ್ಚಾಗ್ತಿದೆ. ಕಳೆದ ವಾರವಷ್ಟೇ ಒಂದು ಹುಲಿಯನ್ನ ಸೆರೆ ಹಿಡಿಯಲಾಗಿತ್ತು. ಇಬ್ಬರನ್ನು ಬಲಿ ಪಡೆದ ಹುಲಿಯನ್ನ ಸೆರೆ ಹಿಡಿದು ನಿಟ್ಟುಸಿರುಬಿಟ್ಟಿತ್ತು ಅರಣ್ಯ ಇಲಾಖೆ. ಆದ್ರೆ, ಈಗ ಬಂಡೀಪುರ ಬದಲಿಗೆ ಬಿಳಿಗಿರಿರಂಗನ ಬೆಟ್ಟದಲ್ಲೂ ಹುಲಿ ಕಾಣಿಸಿಕೊಂಡು ಭೀತಿ ಹುಟ್ಟಿಸಿದೆ.
ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದೆ. ಟೈಗರ್ ರಿಸರ್ವ್ ಫಾರೆಸ್ಟ್ ಇದಾಗಿದ್ದು, ಅರಣ್ಯ ಪ್ರದೇಶ ಬಿಟ್ಟು, ಸುತ್ತುಮುತ್ತಲ ಭಾಗದಲ್ಲಿ ಹುಲಿ ಕಾಣಿಸಿಕೊಳ್ತಿದೆ. ಇಲ್ಲಿನ ಹೊಂಗಲವಾಡಿ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಗುರುಸಿದ್ದಯ್ಯ ಎಂಬುವರ ಹಸುವನ್ನ ಬಲಿ ಪಡೆದಿದೆ.
ಹಸುವನ್ನು ಕೊಂದಿರೋ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ. ಬಂಡೀಪುರದ ನರಹಂತಕ ಹುಲಿ ದಾಳಿ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿರೋದು ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯರು ಭಯಗೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಲ್ಲಿ ಧೈರ್ಯ ತುಂಬಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?