Featured
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು : ಬಿಎಸ್ವೈಗೆ ಕಂಟಕ..!
ಬೆಂಗಳೂರು : ಸಿಎಂ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 17 ಅನರ್ಹ ಶಾಸಕರನ್ನು ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಆಪರೇಷನ್ ಮಾಡಿದ್ದಾರೆ. ಬಿಜೆಪಿ ನಾಯಕರೇ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.
ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಯಡಿಯೂರಪ್ಪ ಅವರ ಆಡಿಯೋ ಕ್ಲಿಪ್ಪಿಂಗ್ ಹೊರಬಂದಿದೆ. ಆಪರೇಷನ್ ಕಮಲದ ಬಗ್ಗೆ ಆಡಿಯೋ ಲೀಕ್ ಆಗಿದ್ದು, ಬಿಜೆಪಿಯವರ ಕುತಂತ್ರ ಹೊರಬಿದ್ದಿದೆ. ಶಾಸಕರನ್ನ ರಾಜೀನಾಮೆ ಕೊಡಿಸಿ ಮುಂಬೈನಲ್ಲಿ ವ್ಯವಸ್ಥೆ ಮಾಡಿದವರು ಅಮಿತ್ ಶಾ ಎಂದು ಸ್ವತಃ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದಕ್ಕಿಂತಲೂ ಸಾಕ್ಷ್ಯ ಏನು ಬೇಕು ಹೇಳಿ ಎಂದು ಗುಂಡೂರಾವ್ ಹೇಳಿದ್ರು.
ಸಂವಿಧಾನದ ವಿರುದ್ಧವಾಗಿ ಅಮಿತ್ ಶಾ ಹಾಗೂ ಯಡಿಯೂರಪ್ಪ ಕೆಲಸ ಮಾಡಿದ್ದಾರೆ. ಹೀಗಾಗಿ, ಇದಕ್ಕೆ ಆ್ಯಂಟಿ ಡಿಫೆಕ್ಷನ್ ಲಾ ಅನ್ವಯ ಆಗಬೇಕು. ೧೦ನೇ ಶೆಡ್ಯೂಲ್ನಲ್ಲಿ ಅನರ್ಹರ ಮೇಲೆ ಕ್ರಮವಾಗಬೇಕು. ಜೊತೆಗೆ ಅಮಿತ್ ಶಾ ಮತ್ತು ಯಡಿಯೂರಪ್ಪ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗಳಿಗೆ ಕಳುಹಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದು, ಮನವಿ ಮಾಡಿರೋದಾಘಿ ದಿನೇಶ್ ಗುಂಡೂರಾವ್ ಹೇಳಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?