ರಾಜ್ಯ
ಬೀದರ್ನಲ್ಲಿ 7.50 ಲಕ್ಷದ ಅಕ್ರಮ ಅಕ್ಕಿ ವಶ

ರೈಸಿಂಗ್ ಕನ್ನಡ ವೆಬ್
ಬೀದರ್ :
ಗಡಿನಾಡು ಬೀದರ್ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ಸಾಗಾಟ ದಂಧೆ ಎಗ್ಗಿಲ್ಲದೆ ಸಾಗಿದೆ.
ಅನ್ನ ಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಸುಮಾರು ಏಳೂವರೆ ಲಕ್ಷ ಮೌಲ್ಯದ 25 ಕ್ವಿಂಟಾಲ್ ಅಕ್ಕಿಯನ್ನ ಲಾರ ಸಮೇತವಾಗಿ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹೈದ್ರಾಬಾದ್ ಮುಂಬೈ ಮಾರ್ಗದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಹುಮನಾಬಾದ್ ಕಡೆಯಿಂದ ಅಕ್ಕಿ ಸಾಗಿಸುವಾಗ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ಕಿಯನ್ನ ಜಪ್ತಿ ಮಾಡಿಕೊಂಡಿದ್ದಾರೆ. ಇಲ್ಲಿನ ಸಸ್ತಾಪೂರ ಬಂಗ್ಲಾ ಸಮೀಪದ ಮುಡಬಿ ಕ್ರಾಸ್ ಬಳಿ ಈ ದಾಳಿ ನಡೆದಿದೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನ ಬಂಧಿಸಲಾಗಿದೆ.
ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಪಿಎಸ್ಐ ಸುನೀಲ್ ಕುಮಾರ್ ನೇತೃತ್ವದ ತಂಡ ತನಿಖೆ ಮುಂದುವರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?