Featured
ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ: ಶಾಸಕ ಅಮರೇಗೌಡ ಬಯ್ಯಾಪುರ ಪರಿಶೀಲನೆ
ರೈಸಿಂಗ್ ಕನ್ನಡ ವೆಬ್:
ಕೊಪ್ಪಳ: ನಾಗಾರಾಜ್ .ವೈ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಡೆಯುತ್ತಿರೋ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ಅಮರೇಗೌಡ ಬಯ್ಯಾಪುರ ಪರಿಶೀಲನೆ ನಡೆಸಿದ್ರು. ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ, ಹುಲಿಯಾಪುರ, ಹಂಚಿನಾಳ್ ಗ್ರಾಮಗಳಲ್ಲಿ ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಶಾಸಕ ಅಮರೇಗೌಡ ಬಯ್ಯಾಪುರ, ನಮ್ಮ ವಿಧಾನಸಭಾ ಕ್ಷೇತ್ರದ ಬಹುತೇಕ ಪ್ರದೇಶವು ಮಳೆಯಾಶ್ರೀತ ಭೂಪ್ರದೇಶವಾಗಿದ್ದು, ಇದ್ರಿಂದ ಪ್ರತಿಯೊಂದು ಗ್ರಾಮಗಳಲ್ಲಿ ಜಾನುವಾರುಗಳಿಗೆ, ರೈತರ ಜಮೀನುಗಳಿಗೆ ನೀರಿಲ್ಲದೆ ಪರದಾಟ ನಡೆಸ್ತಾ ಇದ್ರು. ಇದ್ರಿಂದ ಈ ಬಗ್ಗೆ ಸರ್ಕಾರದ ಗಮನ ಸೆಳೆದು ನನ್ನ ವಿಧಾನಸಭಾ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ ಪ್ರಾರಂಭಿಸಲು ಅನುಮೋದನೆ ಪಡೆಯಲಾಗಿದೆ. ಇದ್ರಿಂದ ಹಲವಾರು ಗ್ರಾಮಗಳು ಬರದಿಂದ ತಪ್ಪಿಸಿಕೊಳ್ಳಲಿವೆ ಎಂದ್ರು.ಇನ್ನೂ ಅಧಿಕಾರಿಗಳಿಗೂ ಸಹ ಗುಣಮಟ್ಟದ ಕಾಮಗಾರಿ ಮಾಡಬೇಕು ಒಂದು ಕಳಪೆ ಕಾಮಗಾರಿ ಕಂಡುಬಂದ್ರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಇದೇ ವೇಳೆ ಸಣ್ಣ ನೀರಾವರಿ ಎಇಇ ರಘುನಾಥ್, ಜೆ.ಇ ರಾಜು ಕಟ್ಟಿಮನಿ ಉಪಸ್ಥಿತರಿದ್ದರು..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?