Featured
ಬೆಳಗಾವಿಯಲ್ಲಿ SSLC ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ

ರೈಸಿಂಗ್ ಕನ್ನಡ ವೆಬ್ :
ಬೆಳಗಾವಿ :
ಕೊರೊನಾ ಯಾರನ್ನೂ ಬಿಡುತ್ತಿಲ್ಲ. SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಲಭಾಂವಿ ಗ್ರಾಮದ ಬಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ.
16 ವರ್ಷದ ಬಾಲಕ, ಲಾಕ್ಡೌನ್ ಸಡಿಲಿಕೆ ಬಳಿಕ ಚೆನ್ನೈನಿಂದ ಗ್ರಾಮಕ್ಕೆ ಬಂದಿದ್ದನು. ಜೂನ್ 1 ರಂದು ಗ್ರಾಮಕ್ಕೆ ಬಂದಿದ್ದ ಬಾಲಕನನ್ನ ಹೋಮ್ ಕ್ವಾರಂಟೈನ್ನಲ್ಲಿ ಇರಲು ಸೂಚಿಸಲಾಗಿತ್ತು. ನಾಲ್ಕು ದಿನಗಳ ಹಿಂದೆ ಬಾಲಕನ ಗಂಟಲು ದ್ರವ ಮಾದರಿಯನ್ನ ಪರೀಕ್ಷೆಗೆ ಕಳುಹಿಸಿದಾಗ, ಪಾಸಿಟಿವ್ ಬಂದಿದೆ.
ತಕ್ಷಣವೇ ಬಾಲಕನನ್ನ ಆರೋಗ್ಯ ಸಿಬ್ಬಂದಿ ಬೆಳಗಾವಿ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಅಲ್ಲದೇ ಬಾಲಕನ ಪ್ರಥಮ ಮತ್ತು ದ್ವಿತೀಯ ಸಂಪರ್ಕ ಬಂದವರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾವಹಿಸಿದ್ದಾರೆ.ಬಾಲಕನ ಮನೆಯ ಸುತ್ತಲಿನ ನೂರು ಮೀಟರ್ ಸೀಲಡೌನ್ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?