ರೈಸಿಂಗ್ ಕನ್ನಡ:
ಯಾದಗಿರಿ:
ಸುರಪುರ ತಾಲೂಕಿನ ಖಾನಾಪುರ ಎಸ್. ಎಚ್. ಜಿಲ್ಲಾ ಪಂಚಾಯತ್ ಸದಸ್ಯನ ಮೇಲೆ ದುಷ್ಕರ್ಮಿಗಳು ಲಾಂಗ್, ಮಚ್ಚು ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಯಾದಗಿರಿ ನಗರದ ಹೊರವಲಯದಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿ ಬಂದ ನಾಲ್ಕು ಜನ ದುಷ್ಕರ್ಮಿಗಳು ಏಕಾಏಕಿ ಲಾಂಗ್ ಮಚ್ಚು ನಿಂದ ಹಲ್ಲೆ ಮಾಡಿ ಮುಳ್ಳು ಕಂಟಿಯಲ್ಲಿ ಬಿಸಾಡಿ ಹೋಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸದಸ್ಯನನ್ನು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ, ಕೈ ಮತ್ತು ಇತರ ಭಾಗಕ್ಕೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಹಳೆ ದ್ವೇಷ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆಗೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಖಾನಾಪುರ ಎಸ್ ಎಚ್ ಜಿಲ್ಲಾ ಪಂಚಾಯತ್ ಸದಸ್ಯ ಮರಿಲಿಂಗಪ್ಪ ಕರ್ನಾಳ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆಗೆ ನಿಖರವಾದ ಕಾರಣ ತಿಳಿದಿಲ್ಲ. ಘಟನ ಸ್ಥಳಕ್ಕೆ ಯಾದಗಿರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?