Connect with us

Featured

SSLC ಪರೀಕ್ಷೆಗೆ ಅಂತಿಮ ಸಿದ್ಧತೆ- ರಾಯಚೂರಿನಲ್ಲಿ ಪರೀಕ್ಷೆ ಬರೆಯಲಿರುವ 3400 ವಿದ್ಯಾರ್ಥಿಗಳು

ರೈಸಿಂಗ್​ ಕನ್ನಡ:

ರಾಯಚೂರು:

Advertisement

ಕೊರೋನಾ ಅಬ್ಬರದ ನಡುವೆಯೇ ಗುರುವಾರದಿಂದ ಆರಂಭವಾಗಲಿರುವ SSLC ಪರೀಕ್ಷೆಗೆ ರಾಯಚೂರು ಜಿಲ್ಲಾ ಶಿಕ್ಷಣ ಇಲಾಖೆ ಸಿದ್ದವಾಗಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 3400 ವಿದ್ಯಾರ್ಥಿಗಳು ‌ಪರೀಕ್ಷೆ ಬರೆಯಲಿದ್ದಾರೆ. ಕೊರೋನ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ B.H ಗೋನಾಳ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಅಬ್ಬರ ತಗ್ಗಿದ್ದರೂ, ಜನರಲ್ಲಿ ಭಯದ ವಾತಾವರಣ ಕಡಿಮೆಯಾಗಿಲ್ಲ. ಈ ಭಯದ ವಾತಾವರಣ ಮಧ್ಯದಲ್ಲಿಯೇ SSLC ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಲಿದೆ. ಜೂನ್​ 25 ರಿಂದ ಜುಲೈ 4 ರವರೆಗೆ ನಡೆಯಲಿರುವ SSLC ಪರೀಕ್ಷೆಗಾಗಿ ಜಿಲ್ಲಾ ಶಿಕ್ಷಣ ಇಲಾಖೆ,‌ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸರ್ವ ರೀತಿಯಲ್ಲಿ ವಿದ್ಯಾರ್ಥಿಗಳು ಕೊರೋನಾ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ B.H ಗೋನಾಳ

ಜಿಲ್ಲೆಯಲ್ಲಿ 77 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 757 ವಿದ್ಯಾರ್ಥಿಗಳು ಅನ್ಯಕೇಂದ್ರದಿಂದ ಬಂದವರು. ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಿರುವುದರಿಂದ ಸರಕಾರವು ವಲಸೆ ಬಂದ ಮಕ್ಕಳಿಗೆ ತಾವಿರುವಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬದಲಿಸಿಕೊಂಡಿದ್ದು, ಅದರಲ್ಲಿ ಅನ್ಯ ಜಿಲ್ಲೆಯಿಂದ 271 ವಿದ್ಯಾರ್ಥಿಗಳು ಬಂದಿದ್ದು, 6 ಮಕ್ಕಳು ಅನ್ಯ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು, ಪರೀಕ್ಷಾ ಕೇಂದ್ರದಿಂದ 200 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಿ ಪಾಲಕರನ್ನು ತಡೆದು ಕೇವಲ ವಿದ್ಯಾರ್ಥಿಗಳನ್ನು ಮಾತ್ರ ಪರೀಕ್ಷಾ ಕೇಂದ್ರದ ಒಳಗೆ ಬರಲು ಅವಕಾಶ ಮಾಡಿಕೊಡಲಾಗುವುದು. ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯರ್ಥಿಗೂ ಸಾಕಷ್ಟು ತಪಾಸಣೆ, ಮಾಡಿ ಮಾಸ್ಕ್ ವಿತರಿಸಿ, ಸ್ಯಾನಿಟೈಸ್ ಮಾಡಲಾಗುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆ ವಿವಿಧ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ತಯಾರಿಯನ್ನು ಮಾಡಿಕೊಂಡಿದೆ. ಪರೀಕ್ಷೆಗೆ ಯಾವುದೇ ರೀತಿಯ ಅಡ್ಡಿ ಆತಂಕ ಇಲ್ಲದೇ ನಡೆಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಹಕಾರವನ್ನು ಪಡೆಯಲಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ