ರೈಸಿಂಗ್ ಕನ್ನಡ:
ಯಾದಗಿರಿ:
ಕೊರೊನಾ ಭೀತಿ ನಡುವೆಯು ಯಾದಗಿರಿಯಲ್ಲಿ ವಿದ್ಯಾರ್ಥಿಗಳು SSLC ಪರೀಕ್ಷೆಗೆ ಹಾರಜಾರಿಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ 59 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 17396 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು. ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಮುಂಜಾಗ್ರತೆ ವಹಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ಮಾಡಿ, ಮಾಸ್ಕ್ ವಿತರಣೆ ಮಾಡಿ ನಂತರ ಜ್ವರ ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಗಳಲ್ಲಿ ಬಿಡಲಾಗಿತ್ತು. ಕೊರೊನಾ ಆತಂಕದ ನಡುವೆ ವಿಧ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸ್ ಭದ್ರತೆ ಕಲ್ಪಿಸಿ, ನಕಲು ತಡೆಯಲು ಶಿಕ್ಷಣ ಇಲಾಖೆ ಶ್ರಮವಹಿಸಿದೆ.
ಬೆಳಗ್ಗೆ ಪರೀಕ್ಷಾ ಕೇಂದ್ರಕ್ಕೆ ವಿಧ್ಯಾರ್ಥಿಗಳು 2ಗಂಟೆಗಳ ಮೊದಲೇ ಆಗಮಿಸಿದ್ದರು. ಸಾಮಾಜಿಕ ಅಂತರ ಕಾಯ್ದುಕೊಂಡು ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶುಕ್ರವಾರ SSLCಯ ಮೊದಲ ಪರೀಕ್ಷೆ ಬೆಳಿಗ್ಗೆ 10:30ಕ್ಕೆ ಆರಂಭವಾಯಿತು. ಪರೀಕ್ಷಾ ಕೇಂದ್ರದ ಸುತ್ತಲೂ ಶಿಕ್ಷಣ ಇಲಾಖೆ ನಿಗಾವಹಿಸಿದೆ. ಪರೀಕ್ಷೆಗೆ ಆಗಮಿಸಿದ ವಿಧ್ಯಾರ್ಥಿಗಳಿಗೆ ಮಾಸ್ಕ್, ಸಾಮಾಜಿಕ ಅಂತರ & ಸ್ಯಾನಿಟೀಜರ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಮೂರ್ನಾಲ್ಕು ಹಂತದಲ್ಲಿ ತಪಾಸಣೆ ಮಾಡಿ ಒಳಗೆ ಬಿಡಲಾಗಿತ್ತು.
ಇನ್ನು ಕೆಲವು ವಿದ್ಯಾರ್ಥಿಗಳು ಮಾಸ್ಕ್ ಇಲ್ಲದೆ ಬಂದಿದ್ದರು. ಅವರಿಗೆ ಸ್ಥಳದಲ್ಲೇ ಮಾಸ್ಕ್ ವಿತರಿಸಲಾಯಿತು. ಪರೀಕ್ಷಾ ಕೇಂದ್ರ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗಿತ್ತು. ಯಾದಗಿರಿಯಲ್ಲಿ ಒಟ್ಟು 59 ಕೇಂದ್ರಗಳಲ್ಲಿ17396 ವಿಧ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 329 ಕಂಟ್ಮೋಂಟ್ ಝೋನ್ ನ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?