Featured
ನಾಳೆ ನಿರ್ಧಾರವಾಗಲಿದೆ ಬೆಂಗಳೂರು ಲಾಕ್‌ಡೌನ್ ಭವಿಷ್ಯ – ನಗರದ MLAಗಳ ಜೊತೆ ಸಿಎಂ ಮಹತ್ವದ ಮೀಟಿಂಗ್
![](https://risingkannada.com/wp-content/uploads/2020/06/WhatsApp-Image-2020-06-25-at-2.23.01-PM-1.jpeg)
ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ವಿಚಾರದಲ್ಲಿ ರಾಜ್ಯಸರ್ಕಾರ ಇನ್ನೂ ಯಾವುದೇ ನಿರ್ಣಯಕ್ಕೆ ಬಂದಿಲ್ಲ. ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಹಾಗೂ ಗೋವಿಂದ ಕಾರಜೋಳ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಭೈರತಿ ಬಸವರಾಜ, ಸಂಸದ ತೇಜಸ್ವಿ ಸೂರ್ಯ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಆದ್ರೆ, ಈ ಸಭೆಯಲ್ಲಿ ಲಾಕ್‌ಡೌನ್ ಕುರಿತು ಅಂತಿಮ ತೀರ್ಮಾನವನ್ನ ಕೈಗೊಳ್ಳಲಾಗಿಲ್ಲ. ಬದಲಾಗಿ ಮುಖ್ಯಮಂತ್ರಿಗಳು ನಾಳೆ ಬೆಂಗಳೂರು ನಗರದ ಎಲ್ಲಾ ಎಂಎಲ್‌ಎಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಸಿಲಿಕಾನ್ ಸಿಟಿಗೆ ಲಾಕ್‌ಡೌನ್ ಅನಿವಾರ್ಯವೇ ಅನ್ನೋ ಕುರಿತು ಎಂಎಲ್‌ಎಗಳಿಂದ ಮಾಹಿತಿ ಪಡೆಯಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೇ ಈ ಮಹತ್ವದ ಸಭೆ ನಡೆಯಲಿದ್ದು.
ಬೆಂಗಳೂರಿನಲ್ಲಿ ಲಾಕ್‌ಡೌನ್ ಮಾಡಬೇಕೆ, ಬೇಡವೆ ಅನ್ನೋ ವಿಚಾರ ನಾಳೆ ಅಂತಿಮವಾಗಲಿದೆ. ಸರ್ಕಾರದ ನಿರ್ಧಾರದ ಬಗ್ಗೆ ಜನರು ತಲೆಕೆಡಿಸಿಕೊಂಡಿದ್ದು, ಜನಸಾಮಾನ್ಯರಿಗೆ ಲಾಕ್‌ಡೌನ್ ಅನಿವಾರ್ಯವಾಗಿದ್ದರೆ, ವರ್ತಕರಿಗೆ, ವ್ಯಾಪಾರಿಗಳಿಗೆ ಲಾಕ್‌ಡೌನ್‌ನಿಂದ ತುಂಬಾನೆ ಲಾಸ್ ಆಗಲಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಒಟ್ಟಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಆರೋಗ್ಯವೇ ಭಾಗ್ಯ ಅನ್ನುವಂತಾಗಿದ್ದು, ಲಾಕ್‌ಡೌನ್ ಅನಿವಾರ್ಯತೆಯೇ ಹೆಚ್ಚಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?