Featured
ಮಹಿಳೆಗೆ ಕೊರೊನಾ ಪಾಸಿಟಿವ್- ತುಮಕೂರು ಜಿಲ್ಲಾನ್ಯಾಯಾಲಯ ಸೀಲ್ಡೌನ್

ರೈಸಿಂಗ್ ಕನ್ನಡ:
ಕೆ.ಆರ್.ಬಾಬು, ತುಮಕೂರು:
ರಾಜ್ಯದಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದಿನೇ ದಿನೇ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ತುಮಕೂರು ಜಿಲ್ಲೆ ಕೂಡ ದಿನಕ್ಕೊಂದು ಕೊರೊನಾ ಪಾಸಿಟೀವ್ ಪ್ರಕರಣಕ್ಕೆ ಸಾಕ್ಷಿಯಾಗುತ್ತಿದೆ. ಇದೀಗ ಕೊರೊನಾ ಸೋಂಕು ತುಮಕೂರು ಜಿಲ್ಲಾ ನ್ಯಾಯಾಲಯದ ಅಂಗಳಕ್ಕೂ ಪ್ರವೇಶಿಸಿದ್ದು, ಇಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರಲ್ಲಿ ಸೋಂಕು ದೃಢವಾಗಿದೆ. ಹಾಗಾಗಿ ಜಿಲ್ಲಾ ನ್ಯಾಯಾಲಯವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಲಯದ ಎಲ್ಲಾ ಕಾರ್ಯ ಕಲಾಪಗಳನ್ನು ರದ್ದುಗೊಳಿಸಲಾಗಿದೆ. ಈವರೆಗೂ ಸುರಕ್ಷತೆಯಿಂದ ಸೀಮಿತ ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತಿತ್ತು. ಸೀಲ್ ಡೌನ್ ಆದ ಹಿನ್ನೆಲೆ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಸಿಬ್ಬಂದಿಗಳಿಗೆ ಆತಂಕ ಶುರುವಾಗಿದ್ದು ಜಿಲ್ಲಾಡಾಳಿತ ಸೋಂಕಿತ ಮಹಿಳೆಯ ಪ್ರಥಮ ಮತ್ತು ದ್ವಿತೀಯ ಸಂಪರ್ಕ ದವರ ಪತ್ತೆಗೆ ಮುಂದಾಗಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?