Featured
‘ಕಲಾವಿದ’ ತೆರೆಗೆ ಬರಲು ಸಿದ್ದ.
![](https://risingkannada.com/wp-content/uploads/2020/06/KALAVIDA.jpg)
ರೈಸಿಂಗ್ ಕನ್ನಡ ಸಿನಿಮಾ ಡೆಸ್ಕ್:
ಪದ್ಮರಾಜ್ ಫಿಲ್ಮ್ಸ್ ನಿರ್ಮಿಸಿರುವ ‘ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶಿವಾನಂದ್ ಹೆಚ್.ಡಿ ನಿರ್ದೇಶಿಸಿದ್ದಾರೆ. ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ‘ಕಲಾವಿದ’ ಶಿವಾನಂದ್ ನಿರ್ದೇಶನದ ಮೊದಲ ಚಿತ್ರ.
‘ಕಲಾವಿದ’ ಚಿತ್ರದ ನಾಯಕನಾಗಿ ಪ್ರದೀಪ್ ಕುಮಾರ್ ಅಭಿನಯಿಸಿದ್ದಾರೆ. ಈ ಚಿತ್ರದ ನಿರ್ಮಾಪಕರು ಆಗಿರುವ ಪ್ರದೀಪ್ ಕುಮಾರ್ ಮೂಲತಃ ಹಾಸನ ಜಿಲ್ಲೆಯವರು. ಬಾಲ್ಯದಿಂದಲೇ ಸಿನಿಮಾ ದಲ್ಲಿ ನಟಿಸಬೇಕೆಂಬ ಆಸೆ ಹೊತ್ತು, ಬೆಂಗಳೂರಿಗೆ ಬಂದ ಇವರು, ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸಿದ್ದಾರೆ.
ನಂತರ ಕೆಲವು ನಾಟಕಗಳಲ್ಲಿ ಅಭಿನಯಿಸಿ, ಒಂದು ವರ್ಷ ಕಾಲ ಕೆಲವು ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಂತರ ಕೋರಮಂಗಲದಲ್ಲಿ ರಂಗ್ ದೇ ಬಸಂತಿ ಎಂಬ ಹೋಟೆಲ್ ಆರಂಭಿಸಿದ್ದಾರೆ. ಅದರಿಂದ ಬಂದ ಹಣದಿಂದ ಈ ಸಿನಿಮಾ ನಿರ್ಮಿಸಿರುವುದಾಗಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.
ಧಾರಾವಾಹಿ ಮೂಲಕ ನಟನೆ ಆರಂಭಿಸಿ, ರಣರಣಕ ಸಿನಿಮಾದಲ್ಲಿ ನಟಿಸಿದ್ದ ಸಂಭ್ರಮ ಈ ಚಿತ್ರದ ನಾಯಕಿ.
ಮಂಜುನಾಥ್ ಹೆಗ್ಡೆ, ಅರುಣಾ ಬಾಲರಾಜ್, ಮೂ. ಗು ಸುರೇಶ್, ವರ್ಷ ಮಲ್ಲೇಶ್, ಗೀತ( ಗುಂಡಮ್ಮ) ಶ್ರೀಧರ್, ಜಗದೀಶ್, ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಸಂಕಲನ ಹಾಗೂ ಆರ್ಯ ರೋಷನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ಇತ್ತೀಚೆಗೆ ‘ಕಲಾವಿದ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಬಂದಿರುವುದಾಗಿ ತಿಳಿಸಿರುವ ಪ್ರದೀಪ್ ಕುಮಾರ್ ಚಿತ್ರ ಬಿಡುಗಡೆಗೆ ಸರ್ಕಾರ ಅನುಮತಿ ನೀಡಿದ ಕೂಡಲೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ‘ಕಲಾವಿದ’ನ ಆಗಮನವಾಗಲಿದೆ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?