Connect with us

Featured

ಡಿಕೆಶಿ ಪದಗ್ರಹಣದ ಉಸ್ತುವಾರಿಯಾಗಿ ಶ್ರಮಿಸುತ್ತಿರುವ ಮಾಣಿಕರೆಡ್ಡಿ- ಸದ್ದಿಲ್ಲದೆ ಜನರ ಮನ ಗೆದ್ದಿರುವ ನಾಯಕ

ರೈಸಿಂಗ್​ ಕನ್ನಡ:

ದುರ್ಗೇಶ್​ ಮಂಗಿಹಾಳ, ಯಾದಗಿರಿ

Advertisement

ಕನಕಪುರದ ಬಂಡೆ ಡಿ.ಕೆ ಶಿವಕುಮಾರ್​ ಅಧಿಕೃತವಾಗಿ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಪದ ಗ್ರಹಣ ಕಾರ್ಯಕ್ರಮಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಶಿಸ್ತು ಬದ್ದವಾಗಿ ಕಾರ್ಯಕ್ರಮ ವೀಕ್ಷಣೆಗೆ ಜನರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ರಾಜ್ಯ ಘಟಕ ಆದೇಶಿಸಿದೆ. ಅದರಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಮತ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣದ ಉಸ್ತುವಾರಿಯನ್ನಾಗಿ ಮಾಣಿಕರೆಡ್ಡಿ ಕುರುಂದಿಯನ್ನು ನೇಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆದೇಶದಂತೆ ಹುಮ್ನಬಾದ್ ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಸಂಚರಿಸಿ ಪದ ಗ್ರಹಣ ವೀಕ್ಷಣೆಗೆ ಸಿದ್ದತೆ ಮಾಡಲಾಗಿದೆ. ಡಿಕೆಶಿ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕಾರ್ಯಕರ್ತರು, ಮುಖಂಡರು ತೆರಳಲು ಸಾಧ್ಯವಾಗದ ಹಿನ್ನಲೆಯಲ್ಲಿ ಆಯಾ ಗ್ರಾಮದಲ್ಲಿ ಟಿವಿ ಪರದೆ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ‌ಈ ಮೂಲಕ ಜನರು ಶುಭಾಶಯಗಳು ಕೊರಲಿದ್ದಾರೆ ಎಂದು ಕಾಂಗ್ರೆಸ್ ಕಿಸಾನ್ ಸಮಿತಿ ಕಾರ್ಯದರ್ಶಿ ಮಾಣಿಕರೆಡ್ಡಿ ಕುರುಕುಂದಿ ತಿಳಿಸಿದ್ದಾರೆ.

ಸರಳ ಸಜ್ಜನಿಗೆ ಹೆಸರು ವಾಸಿಯಾಗಿರುವ ಶ್ರೀಯುತ ಚತುರ ರಾಜಕಾರಣಿ ಮಾಣಿಕರೆಡ್ಡಿ ಕುರುಕುಂದಿ, ರಾಜಕೀಯ ಅಖಾಡಕ್ಕೆ ಧುಮುಕಿ ಬರೋಬ್ಬರಿ 20 ವರ್ಷಗಳು ಗತಿಸಿವೆ. 1999 ರಿಂದ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಅಂದಿನ ಶಾಸಕ ಎ.ಬಿ ಮಾಲಕರೆಡ್ಡಿ ಜೊತೆಗೂಡಿ ಜನರ ಸಂಕಷ್ಟದಲ್ಲಿ ಭಾಗಿಯಾಗಿದ್ದರು . ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಸೋತಾಗಲು, ಗೆದ್ದಾಗಲು ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಪಕ್ಷ‌ನಿಷ್ಠೆ ಮೆರೆದಿದ್ದಾರೆ. ಅಲ್ಲದೆ ದಶಗಳ ಕಾಲ ಶಾಸಕ ಎ.ಬಿ ಮಾಲಕರೆಡ್ಡಿ ಅವರ ಖಾಸಗಿ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಎಲ್ಲಾ ಮುಖಂಡರ, ಕಾರ್ಯಕರ್ತರ ಜೊತೆ ಮಾಣಿಕರೆಡ್ಡಿ ನೇರ ಸಂಪರ್ಕ ಹೊಂದಿದ್ದಾರೆ.

Advertisement

2018ರ ವಿಧಾನಸಭೆ ಚುನಾವಣೆಯಲ್ಲಿ ಎ.ಬಿ. ಮಾಲಕರೆಡ್ಡಿ ಸೋಲಿನ ನಂತರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ರು. ಆದ್ರೆ ಮಾಣಿಕರೆಡ್ಡಿ ಮಾತ್ರ ಪಕ್ಷ ಬಿಡದೆ ಕಾಂಗ್ರೆಸ್ ಪಕ್ಷದಲ್ಲೆ ಅಡಿಪಾಯವಾಗಿ ನಿಂತು ಪಕ್ಷದ ಹಾಗೂ ಕಾರ್ಯಕರ್ತರ‌ ಸಮಸ್ಯೆಗಳಿಗೆ ಸರ್ಕಾರದಿಂದ ನ್ಯಾಯ ಒದಗಿಸುವ ಕಾರ್ಯ ಮಾಡ್ತಿದ್ದಾರೆ. ಜನ ಸೇವೆ ಮೂಲಕ ರಾಜಕೀಯದಲ್ಲಿ ಉತ್ತಮ ಸ್ಥಾನಗಳಿಸುವ ಇಂಗಿತ ಇವರಲ್ಲಿದೆ. ಲಾಭ, ನಷ್ಟ ಅನ್ನದೆ ಸದಾ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.

20 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ ಹಾಗೂ ರಾಷ್ಟ್ರ ನಾಯಕರ ಜೊತೆ ಉತ್ತಮ ಬಾಂಧವ್ಯಹೊಂದಿದ್ದಾರೆ. ಹಿರಿಯ ನಾಯಕರಾದ ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ ಪಾಟೀಲ್, ಆರ್ ವಿ ದೇಶಪಾಂಡೆ ಅಂತಹ ನಾಯಕರ ಜೊತೆಗೆ ಉತ್ತಮ‌ ಒಡನಾಟವಿದೆ.

ಇನ್ನೂ ಸ್ಥಳೀಯವಾಗಿ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ತನ್ನದೆ ಜನಬಲ, ಅಪ್ತರನ್ನು ಹೊಂದಿದ್ದಾರೆ. ರೈತರ, ಕಾರ್ಮಿಕರ ಹಾಗೂ ನಿರುದ್ಯೋಗಿ ಯುವಕರ ಕಷ್ಟ ಸುಖವನ್ನು ವಿಚಾರಸಿ ತಮ್ಮ ಹಿರಿಯ ನಾಯಕರ ಮೂಲಕ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡ್ತಿದ್ದಾರೆ.

ಮಾಹಮಾರಿ ಕೊರೋನಾ ಕಾಲದಲ್ಲಿ, ತಿಂಗಳುಗಳ ಕಾಲ ಲಾಕ್ ಡೌನ ಆದಂತಹ ಸಂಧರ್ಭದಲ್ಲಿ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲಿಕಿದ್ರು. ಒಂದುಕಡೆ ಊಟಕ್ಕಾಗಿ ಪರದಾಟ, ಇನ್ನೊಂದೆಡೆ ರೈತರ ಬೆಳೆ ಜಮೀನಿನಲ್ಲೆ ಕೊಳೆತು ಹೋಗ್ತಿದ್ದವು. ರೈತರ, ಬಡವರ ಸಂಕಷ್ಟ ಅರಿತ ಜನರ ಕಣ್ಮಣಿ ನಾಯಕ ಮಾಣಿಕ ರೆಡ್ಡಿ. ನೊಂದ ರೈತರ ಜಮೀನಿಗೆ ಸ್ವತಃ ತೆರಳಿ ಬೆಳೆದಿದ್ದ ಕಲ್ಲಂಗಡಿ, ಪಪ್ಪಾಯಿ ಖರೀದಿಸಿ ರೈತರಿಗೆ ನೆರವಾದ್ರು. ರೈತರಿಂದ ಖರೀದಿಸಿದ ಹಣ್ಣುಗಳನ್ನು ಕ್ಷೇತ್ರದ ಜನರಿಗೆ ಉಚಿತವಾಗಿ ನೀಡಿ ಜನರಿಂದ ಪ್ರೀತಿ ಗಿಟ್ಟಿಸಿಕೊಂಡಿದ್ದಾರೆ. ಪಕ್ಷದಲ್ಲಿ ಯಾವುದೇ ಲಾಭ, ಅಧಿಕಾರದ ಆಸೆಗೆ ಹಂಬಲಿಸದೆ, ಜನರ ಸಂಕಷ್ಟದಲ್ಲಿ ಭಾಗಿಯಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಜನರೇ ಜೀವಾಳ ಎನ್ನುತ್ತಿರುವ ನಾಯಕನಿಗೆ ಮುಂದೆ ಒಳ್ಳೆಯ ಭವಿಷ್ಯ ಸಿಗಲಿ ಎನ್ನುವುದು ಎಲ್ಲರ ಹಾರೈಕೆಯಾಗಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ